Ranga Sangathi book release | ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಮೂರು ಪುಸ್ತಕಗಳ ಬಿಡುಗಡೆ
ಮಂಗಳೂರು: ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಶಶಿರಾಜ್ ರಾವ್ ಕಾವೂರು ಅವರ ಮೂರು ನಾಟಕ ಪುಸ್ತಕಗಳ ಬಿಡುಗಡೆ ಸಮಾರಂಭ ಮಂಗಳೂರು ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು.
ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಎಡಪಡಿತ್ತಾಯ ಸಂಪಿಗೆ ನಗರ ಪೊಲೀಸ್ ಸ್ಟೇಷನ್ ಪುಸ್ತಕವನ್ನು ಬಿಡುಗಡೆ ಮಾಡಿದರು.
ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ದಾಟ್ಸ್ ಆಲ್ ಯುವರ್ ಆನರ್ ಪುಸ್ತಕವನ್ನು ಬಿಡುಗಡೆ ಮಾಡಿದರು.
ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾದ ಡಾ. ನಾ. ದಾಮೋದರ ಶೆಟ್ಟಿ ಅವರು ಮಿನುಗಲೆ ಮಿನುಗೆಲೆ ನಕ್ಷತ್ರ ಪುಸ್ತಕವನ್ನು ಬಿಡುಗಡೆ ಮಾಡಿದರು.
ರಂಗಭೂಮಿ ನಿರ್ದೇಶಕ ಕಾಸರಗೋಡು ಚಿನ್ನಾ, ಹಿರಿಯ ಪತ್ರಕರ್ತ ಹಾಗೂ ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ, ರವೀಂದ್ರನಾಥ ಸಿರಿವರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಂಗ ನಿರ್ದೇಶಕ ಮೈಮ್ ರಾಮ್ ದಾಸ್ ಸ್ವಾಗತಿಸಿದರೆ, ಕೆ.ಕೆ. ಪೇಜಾವರ ಕಾರ್ಯಕ್ರಮ ನಿರೂಪಿಸಿದರು.