![Congress thanks giving programme | ಅಮರಪಡ್ನೂರು, ಅಮರಮುಡ್ನೂರು ಗ್ರಾ.ಪಂ. ಚುನಾವಣೆ: ಕಾಂಗ್ರೆಸ್‌ನಿಂದ ಅಭಿನಂದನಾ ಕಾರ್ಯಕ್ರಮ Congress thanks giving programme | ಅಮರಪಡ್ನೂರು, ಅಮರಮುಡ್ನೂರು ಗ್ರಾ.ಪಂ. ಚುನಾವಣೆ: ಕಾಂಗ್ರೆಸ್‌ನಿಂದ ಅಭಿನಂದನಾ ಕಾರ್ಯಕ್ರಮ](https://blogger.googleusercontent.com/img/b/R29vZ2xl/AVvXsEirctaJNiYkm6Y8vek8HYHeW3QwJITmuNtbPOouehdD3uNa8Nkzc3XEssb6OYeW12y4AP_iEZYnEp3kbev3s4I5aZNmKZcF1BkyB8SMmJOc1kX-uYJqxgqsm4sR-6s_Vgqms6rvibr5c4M/s16000/IMG-20210117-WA0051.jpg)
Congress thanks giving programme | ಅಮರಪಡ್ನೂರು, ಅಮರಮುಡ್ನೂರು ಗ್ರಾ.ಪಂ. ಚುನಾವಣೆ: ಕಾಂಗ್ರೆಸ್‌ನಿಂದ ಅಭಿನಂದನಾ ಕಾರ್ಯಕ್ರಮ
ಅಮರಪಡ್ನೂರು, ಅಮರಮುಡ್ನೂರು ಗ್ರಾಮ ಪಂಚಾಯತ್ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗಳಿಗೆ, ವಿಜೇತರಿಗೆ, ಹಾಗೂ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನಾ ಕಾರ್ಯಕ್ರಮ*
ಅಮರಪಡ್ನೂರು, ಅಮರಮುಡ್ನೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಹರ್ನಿಶಿ ದುಡಿದ ಕಾರ್ಯಕರ್ತರಿಗೆ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಹಾಗೂ ವಿಜೇತರಿಗೆ ಅಭಿನಂದನೆ ಮತ್ತು ಮತದಾರರಿಗೆ ಕೃತಜ್ಞತೆ ಕಾರ್ಯಕ್ರಮ ಅಮರಪಡ್ನೂರು ಗ್ರಾಮದ ಶೇಣಿ ಅಶೋಕ್ ಚೂಂತಾರು ರವರ ಮನೆಯಲ್ಲಿ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಶ್ರೀ ಜಯಪ್ರಕಾಶ್ ರೈ ಎನ್ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾದ ಶ್ರೀ ಧನಂಜಯ ಅಡ್ಪಂಗಾಯ ಅಭ್ಯರ್ಥಿಗಳನ್ನು ಅಭಿನಂದಿಸಿದರು.
ಬ್ಲಾಕ್ ಕಾಂಗ್ರೆಸ್ ವಕ್ತಾರ ನಂದರಾಜ್ ಸಂಕೇಶ, ಬ್ಲಾಕ್ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ, ಐವರ್ನಾಡು ಗ್ರಾಮದ ಕಾಂಗ್ರೆಸ್ ಉಸ್ತುವಾರಿ ಜಯಪ್ರಕಾಶ್ ನೆಕ್ರಪ್ಪಾಡಿ, ಅಮರ ಮುಡ್ನೂರು ಗ್ರಾಮ ಕಾಂಗ್ರೆಸ್ ಅಧ್ಯಕ್ಷರಾದ ಬಾಲಸುಬ್ರಹ್ಮಣ್ಯ ಮೋಂಟಡ್ಕ, ಅಮರಪಡ್ನೂರು ಗ್ರಾಮ ಕಾಂಗ್ರೆಸ್ ಅಧ್ಯಕ್ಷರಾದ ರಾಮಯ್ಯ ರೈ ವೇದಿಕೆ ಯಲ್ಲಿ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು, ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು. ನೂತನ ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಚೂಂತಾರು ಕಾರ್ಯಕ್ರಮ ನಿರ್ವಹಿಸಿದರು.