DKS condolence on Varalaxmi Gundurao death | ವರಲಕ್ಷ್ಮಿ ಗುಂಡೂರಾವ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸಂತಾಪ
Wednesday, January 6, 2021
KPCC president DKS had lunch with Ex CM Siddaramaiah and others
ಮಂಗಳೂರು: ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರ ಪತ್ನಿ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರ ತಾಯಿ ವರಲಕ್ಷ್ಮಿ ಗುಂಡೂರಾವ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
'ಶ್ರೀಮತಿ ವರಲಕ್ಷ್ಮಿ ಗುಂಡೂರಾವ್ ಅವರ ಸಾವಿನ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ನಾವೆಲ್ಲರೂ ದಿನೇಶ್ ಗುಂಡೂರಾವ್ ಜತೆಗೆ ನಿಲ್ಲುತ್ತೇವೆ. ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರಿಗೆ ಸಿಗಲಿ' ಎಂದು ಡಿ.ಕೆ. ಶಿವಕುಮಾರ್ ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.