Anticipatory bail application by KAS Officer? | ವರದಕ್ಷಿಣೆ ಕಿರುಕುಳ ದೂರು: ಮೂಡ ಆಯುಕ್ತ ದಿನೇಶ್‌ಗೆ ಬಂಧನ ಭೀತಿ? ನಿರೀಕ್ಷಣಾ ಜಾಮೀನಿಗೆ ಅರ್ಜಿ?
ಮಂಗಳೂರು : ಪ್ರತಿಷ್ಠಿತ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಈಗಿನ ಆಯುಕ್ತರಾದ ಜಿ.ಟಿ. ದಿನೇಶ್ ಕುಮಾರ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. 2012ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿಯಾಗಿರುವ ದಿನೇಶ್ ಅವರ ವಿರುದ್ಧ ಪತ್ನಿ ತಮ್ಮ ವಿರುದ್ಧ ಹಲ್ಲೆ ನಡೆಸಿ ಕೊಲೆ ಯತ್ನ ಮತ್ತು ವರದಕ್ಷಿಣೆ ಕಿರುಕುಳದ ಆರೋಪದ ಮೇಲೆ ಪೊಲೀಸ್ ಠಾಣೆಯಲ್ಲಿ ದೂರ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬಂಧನದ ಭೀತಿಯಲ್ಲಿ ಇರುವ ದಿನೇಶ್ ಕುಮಾರ್, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಈ ವಾರದಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ.
ಘಟನೆಯ ವಿವರ
ಪ್ರತಿಷ್ಠಿತ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಈಗಿನ ಆಯುಕ್ತರಾದ ಜಿ.ಟಿ. ದಿನೇಶ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ತಮ್ಮ ಪತ್ನಿ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ಮತ್ತು ವರದಕ್ಷಿಣೆ ಕಿರುಕುಳದ ಆರೋಪದ ಮೇಲೆ ಅವರ ವಿರುದ್ಧ ದೂರು ದಾಖಲಾಗಿದೆ.
ಕೆ.ಎ.ಎಸ್. ಹಿರಿಯ ಶ್ರೇಣಿಯ ಅಧಿಕಾರಿಯಾಗಿರುವ ದಿನೇಶ್ ವಿರುದ್ಧ ಅವರ ಪತ್ನಿ ಕೆ.ಪಿ. ದೀಪ್ತಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮೂಡ ಆಯುಕ್ತರಾದ ದಿನೇಶ್ ಕುಮಾರ್ ಅವರ ಸಹೋದರಿ ರಮ್ಯಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
2012ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿಯಾಗಿರುವ ದಿನೇಶ್ ಅವರು 2015ರಲ್ಲಿ ದೀಪ್ತಿ ಅವರೊಂದಿಗೆ ಮದುವೆ ಮಾಡಿಕೊಂಡಿದ್ದರು. ಇವರ ದಾಂಪತ್ಯ ಜೀವನದಲ್ಲಿ ದಂಪತಿಗೆ ಒಂದು ಹೆಣ್ಣು ಮಗು ಕೂಡ ಇದೆ.