RSS Leader takes blessing of Poojary | ಜನಾರ್ದನ ಪೂಜಾರಿ ನಿವಾಸಕ್ಕೆ ಕಲ್ಲಡ್ಕ: ಭೇಟಿ ವೇಳೆ ಪೂಜಾರಿ ಆಶೀರ್ವಾದ ಪಡೆದ ಆರ್‌ಎಸ್‌ಎಸ್ ಮುಖಂಡ
Monday, February 8, 2021
ಹಿರಿಯ ರಾಜಕಾರಣಿ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಆರ್‌ಎಸ್‌ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಭೇಟಿ ನೀಡಿದ್ದಾರೆ.
ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಪತ್ನಿ ಕಮಲಾ ಜೊತೆ ಭೇಟಿ ನೀಡಿದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಪೂಜಾರಿ ಅವರ ಕಾಲು ಹಿಡಿದು ಆಶೀರ್ವಾದ ಪಡೆದುಕೊಂಡಿದ್ದಾರೆ.
ಇದೊಂದು ಸೌಹಾರ್ದಯುತ ಭೇಟಿ ಎಂದು ಹೇಳಲಾಗಿದ್ದರೂ ರಾಜಕೀಯ ವಲಯದಲ್ಲಿ ಈ ಭೇಟಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಭೇಟಿ ಸಂದರ್ಭದಲ್ಲಿ ಡಾ. ಭಟ್ ಅವರು ಪೂಜಾರಿಯವರಿಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ಬಗ್ಗೆ ಮಾಹಿತಿ ನೀಡಿದರು.
ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಆಧುನೀಕರಣದ ರೂವಾರಿ ಹಾಗೂ ರಾಜಕೀಯ ನೇತಾರ ಜನಾರ್ದನ ಪೂಜಾರಿ ಅವರು ವಯೋಸಹಜ ಕಾರಣಗಳಿಂದ ಇತ್ತೀಚಿನ ವರ್ಷಗಳಲ್ಲಿ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದಾರೆ.
ಕಳೆದ ವರ್ಷ ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆ ದಾಖಲಾಗಿದ್ದ ಅವರು ಇದೀಗ ಗುಣಮುಖರಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ಧಾರೆ.