decision soon on School re-open | ಶಾಲಾರಂಭ ಕುರಿತು ಶೀಘ್ರದಲ್ಲೇ ತೀರ್ಮಾನ: ಸುಬ್ರಹ್ಮಣ್ಯದಲ್ಲಿ ಸಚಿವ ಸುರೇಶ್ ಕುಮಾರ್
Sunday, March 7, 2021
Video: Minister Suresh Kumar press brief at Subramanya
ಸುಬ್ರಹ್ಮಣ್ಯ: ಆರೋಗ್ಯ ಇಲಾಖೆಯ ತಾಂತ್ರಿಕ ತಜ್ಞರ ತಂಡದೊಂದಿಗೆ ಚರ್ಚಿಸಿ ಒಂದನೇ ತರಗತಿಯಿಂದ ಐದನೇ ತರಗತಿ ಆರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಅವರು ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.ಕೊರೊನಾ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಒಂದನೇ ತರಗತಿಯಿಂದ ಐದನೇ ತರಗತಿಗಳನ್ನು ಆರಂಭಿಸುವ ಬಗ್ಗೆ ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ತಜ್ಞರ ಅಭಿಪ್ರಾಯವನ್ನು ಪಡೆದುಕೊಂಡ ನಂತರದಲ್ಲಿ ತೀರ್ಮಾನ ಕೈಗೊಳ್ಳಲಾವುದು ಎಂದು ಸಚಿವರು ಹೇಳಿದರು.