Nelyadi Accident | ನೆಲ್ಯಾಡಿ ರಸ್ತೆ ಅಪಘಾತ: ಕಂಟೈನರ್ ಲಾರಿ, ಖಾಸಗಿ ಬಸ್ ಭಸ್ಮ
Thursday, March 25, 2021
ನೆಲ್ಯಾಡಿ : ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಕಂಟೈನರ್ ಲಾರಿ ಮತ್ರು ಖಾಸಗಿ ಬಸ್ಸು ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ಲಾರಿ ಚಾಲಕ ಲಾರಿಯಿಂದ ಹೊರಬರಲಾಗದೇ ಸಜೀವ ದಹನಗೊಂಡ ಘಟನೆ ಮಾ.24 ತಡರಾತ್ರಿ ಸಂಭವಿಸಿದೆ.
ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ಸು ಮತ್ತು ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಮುಖಾಮುಖಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯವನ್ನರಿತು ಕೆಳಗಿಳಿದು ಪಾರಾಗಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಾಗಿ ಎರಡೂ ವಾಹನಗಳು ಸುಟ್ಟು ಭಸ್ಮವಾಗಿದ್ದು, ಲಾರಿ ಚಾಲಕ ಮಾತ್ರ ಲಾರಿಯೊಳಗೆ ಸಿಲುಕಿ ಹೊರಬರಲಾಗದೆ ಸಜೀವ ದಹನವಾಗಿರುವುದಾಗಿ ಮಾಹಿತಿ ಲಭಿಸಿದೆ.
ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.