Womens day in Alvas | ಮಹಿಳೆಯರಿಗೆ ಕಾನೂನು ತಿಳುವಳಿಕೆ ಅತ್ಯವಶ್ಯಕ: ಹಿರಿಯ ಸರ್ಕಾರಿ ಪ್ರಾಸಿಕ್ಯೂಟರ್ ಜ್ಯೂಡಿತ್ ಕ್ರಾಸ್ತ
ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳುವುದು ಮಹಿಳೆಯರಿಗೆ ಅತ್ಯವಶ್ಯಕವಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಮಂಗಳೂರು ವಿಭಾಗದ ಹಿರಿಯ ಕಾನೂನು ಅಧಿಕಾರಿ ಮತ್ತು ಸರ್ಕಾರಿ ಅಭಿಯೋಜಕರಾದ ಜ್ಯೂಡಿತ್ ಕ್ರಾಸ್ತ ಹೇಳಿದರು.
ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಬಾಗದ ವತಿಯಿಂದ ಮಿಜಾರಿನಲ್ಲಿ ನಡೆದ ಮಹಿಳಾ ದಿನಾಚರಣೆಯಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಮಹಿಳೆಯರಿಗೆ ರಕ್ಷಣೆ ನೀಡುವ ಕಾನೂನುಗಳು, ಮಹಿಳಾ ದೌರ್ಜನ್ಯ ತಡೆ ಕಾಯ್ದೆಗಳ ಬಗ್ಗೆ ಎಲ್ಲರಿಗೂ ಅರಿವು, ಮಾಹಿತಿ ಇರಬೇಕು. ಆದರೆ, ಅನೇಕ ಸಂದರ್ಭಗಳ್ಲಲಿ ಮಾಹಿತಿ ಕೊರತೆಯಿಂದಾಗಿ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುವುದಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಪೋಕ್ಸೋ ಕಾಯ್ದೆ, ವರದಕ್ಷಿಣ ತಡೆ ಆಯ್ದೆ, ಕೌಟುಂಬಿಕ ದೌರ್ಜನ್ಯ ಕಾಯ್ದೆ, ಐಟಿ ಆಕ್ಟ್ ಮೊದಲಾದ ಕಾನೂನುಗಳು ಮಹಿಳೆಯರಿಗೆ ರಕ್ಷಣೆ ನೀಡುತ್ತವೆ. ದೌರ್ಜನ್ಯ ನಡೆದ ಸಂದರ್ಭದಲ್ಲಿ ಮಹಿಳೆಯರು ದೂರು ದಾಖಲಿಸಲು ಮುಂದೆ ಬರುವಂತಾಗಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ಣಾಟಕ ಬ್ಯಾಂಕಿನ ಮಂಗಳೂರು ವಿಭಾಗದ ಡೆಪ್ಯೂಟಿ ಜನರಲ್ ಸಾಂಡ್ರ ಲೊರೆನಾ, ಮಹಿಳಾ ಯುವ ಉದ್ಯಮಿ ಹಾಗೂ ಕೆಸಿಸಿಐನ ನಿರ್ದೇಶಕಿ ಆತ್ಮಿಕಾ ಅಮೀನ್, ಪೂಂಜಾಲಕಟ್ಟೆಯ ಪೊಲೀಸ್ ಎಸ್‌ಐ ಸೌಮ್ಯ ಹಾಗೂ ಗಂಜಿಮಠದ ರಾಜ್ ಎಜುಕೇಶನ್ ಟ್ರಸ್ಟ್ ನ ಮಮತಾ ಶೆಟ್ಟಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಆಳ್ವಾಸ್ ಸ್ನಾತಕೋತ್ತರ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್, ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹಾಗೂ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ ಕ್ಲಾರೆಟ್ ಮೆಂಡೋನ್ಸಾ ಉಪಸ್ಥಿತರಿದ್ದರು.
ಪ್ರಥಮ ಎಂಬಿಎ ವಿಭಾಗದ ವಿದ್ಯಾರ್ಥಿ ಅಂಕಿತ ಮತ್ತು ಸಂಗೀತ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಗುರುಪ್ರಸಾದ್ ವಂದಿಸಿದರು.