Govt successful in controling Corona | ಕೊರೋನಾ ನಿಯಂತ್ರಣದಲ್ಲಿ ಸರ್ಕಾರ ಯಶಸ್ವಿ: ಅರವಿಂದ ಲಿಂಬಾವಳಿ
Saturday, April 24, 2021
ಯಡಿಯೂರಪ್ಪ ಸರ್ಕಾರ ಕೊರೋನಾ ನಿಯಂತ್ರಣ ಮಾಡುವಲ್ಲಿ ವಿಫಲವಾಗಿಲ್ಲ. ಪ್ರತಿಪಕ್ಷ ಕಾಂಗ್ರೆಸ್ ವಿರೋಧ ಮಾಡುತ್ತಲೇ ಇರಲಿ. ಸರ್ಕಾರ ಜಾರಿಗೆ ತಂದ ಎಲ್ಲ ನಿಯಮಗಳನ್ನು ಜನ ಕಟ್ಟುನಿಟ್ಟಾಗಿ ಪಾಲಿಸಲಿ. ಜನರು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ದೇಶ ಮತ್ತು ರಾಜ್ಯ ಶೀಘ್ರವೇ ಕೊರೋನಾ ಸೋಂಕಿನಿಂದ ಮುಕ್ತವಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.
ಕೊರೋನಾ ಅಧಿಸೂಚನೆ ಬಗ್ಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ. ಕಾಂಗ್ರೆಸ್ ಇರುವಾಗ ಕೊರೋನಾ ಬಂದಿಲ್ಲ. ಬಂದಿದ್ದರೆ ಅದರ ಕಷ್ಟ ಗೊತ್ತಾಗುತ್ತಿತ್ತು ಎಂದು ಅವರು ಹೇಳಿದರು.
ಮಂಗಳೂರಿನ ಅರಣ್ಯ ಭವನದಲ್ಲಿ ಭೇಟಿ ನೀಡಿದ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು.