
Free Covid Vaccine in Mangaluru | ಅತ್ತಾವರದಲ್ಲಿ ಉಚಿತ ಕೋವಿಡ್ ಲಸಿಕಾ ಅಭಿಯಾನ: ಕಾರ್ಪೊರೇಟರ್ ಅಬ್ದುಲ್ ರವೂಫ್
Saturday, April 3, 2021
ಮಂಗಳೂರು: ನಗರದ ಅತ್ತಾವರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ರವೂಫ್ ವ್ಯವಸ್ಥೆ ಮಾಡಿದ್ದಾರೆ.
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ದಿನಾಂಕ 6/04/2021 ಹಾಗೂ 8/04/2021ರಂದು ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಲಸಿಕೆ ನೀಡಿಕೆ ಕಾರ್ಯಕ್ರಮದಲ್ಲಿ 45 ವರ್ಷ ಮೇಲ್ಪಟ್ಟವರು ತಮ್ಮ ಗುರುತು ಚೀಟಿಯೊಂದಿಗೆ ಆ ದಿನ ಬಂದು ಲಸಿಕೆ ಪಡೆದುಕೊಳ್ಳಬಹುದು.
ಆ ಮೂರು ದಿನಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಈ ಅಭಿಯಾನ ನಡೆಯಲಿದ್ದು, ಅರ್ಹರು ಇದನ್ನು ಸದುಪಯೋಗ ಪಡೆದುಕೊಳ್ಳಬಹುದು ಎಂದು ಮಿಲಾಗ್ರಿಸ್ ವಾರ್ಡ್ ಕಾರ್ಪೊರೇಟರ್ ಅಬ್ದುಲ್ ರವೂಫ್ ತಿಳಿಸಿದ್ದಾರೆ.