-->
oxygen plant for mangaluru | ವೆನ್ಲಾಕ್, ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್‌ಗೆ ಚಿಂತನೆ: ಶಾಸಕ ವೇದವ್ಯಾಸ್ ಕಾಮತ್

oxygen plant for mangaluru | ವೆನ್ಲಾಕ್, ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್‌ಗೆ ಚಿಂತನೆ: ಶಾಸಕ ವೇದವ್ಯಾಸ್ ಕಾಮತ್




ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಹಾಗೂ ಸಕಾಲದಲ್ಲಿ ಆಕ್ಸಿಜನ್ ಪೂರೈಸುವ ಕುರಿತು ಮಹತ್ವದ ಸಭೆ ನಡೆಯಿತು. ಶಾಸಕ ವೇದವ್ಯಾಸ್ ಕಾಮತ್ ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಆಕ್ಸಿಜನ್ ಪೂರೈಕೆದಾರರ, ಐಎಂಎ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ, ದಕ್ಷಿಣ ಜಿಲ್ಲೆಯ ಆಸ್ಪತ್ರೆಗಳಲ್ಲಿ ಯಾವುದೇ ಕಾರಣಕ್ಕೂ ಆಕ್ಸಿಜನ್ ಕೊರತೆ ಉಂಟಾಗದಂತೆ, ಸಕಾಲದಲ್ಲಿ ಆಕ್ಸಿಜನ್ ಪೂರೈಸುವ ಕುರಿತು ಚಿಂತನೆ ನಡೆಸಲಾಯಿತು.


ಈಗಾಗಲೇ ಇಎಸ್ಐ ಹಾಗೂ ಬಂಟ್ವಾಳದ ತಾಲೂಕು ಆಸ್ಪತ್ರೆಯಲ್ಲಿ ಎಂಸಿಎಫ್ ವತಿಯಿಂದ ಸಿಎಸ್ಆರ್ ಅನುದಾನದಡಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸುವ‌ ಕುರಿತು ನಿರ್ಧರಿಸಲಾಗಿದೆ. ಇನ್ನೊಂದು ತಾಲೂಕಿಗೆ ಎಂ.ಆರ್.ಪಿ.ಎಲ್ ಮೂಲಕ ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ರೂಪುರೇಷೆ ಸಿದ್ಧಪಡಿಸಲಾಗಿದೆ. ಇನ್ನುಳಿದ ಎರಡು ತಾಲೂಕಿಗೆ ಸಣ್ಣ ಪ್ರಮಾಣದ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಅತೀ ಶೀಘ್ರದಲ್ಲೇ ಯೋಜನೆ ಪೂರ್ಣಗೊಳಿಸುವ ಚಿಂತನೆಯಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.





ದೊಡ್ಡ ಪ್ರಮಾಣದಲ್ಲಿ ಆಕ್ಸಿಜನ್ ಉತ್ಪಾದಿಸಲು ವೆನ್ಲಾಕ್ ಆಸ್ಪತ್ರೆಯಲ್ಲಿ ಹೊಸದಾಗಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಮುಂದಿನ 45-50 ದಿನಗಳೊಳಗೆ ಪ್ಲಾಂಟ್ ನಿರ್ಮಾಣವಾಗಲಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಜಿಲ್ಲಾಡಳಿತದ ವತಿಯಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.


ಸಭೆಯಲ್ಲಿ ಆಕ್ಸಿಜನ್ ಪೂರೈಕೆದಾರರು, ಐಎಂಎ ವೈದ್ಯರ ತಂಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article