Bantwal ASI died - ಬಂಟ್ವಾಳ ನಗರ ಎಎಸ್‌ಐ ಜಯರಾಮ ರೈ ನಿಧನ
Monday, May 31, 2021
ಅಸೌಖ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ಪೊಲೀಸ್ ಅಧಿಕಾರಿಯನ್ನು ಬಂಟ್ವಾಳ ಠಾಣೆಯ ಎಎಸ್‌ಐ ಜಯರಾಮ ರೈ ಎಂದು ಗುರುತಿಸಲಾಗಿದೆ.
ಬಂಟ್ವಾಳದ ಮಂಚಿ ಗ್ರಾಮದ ನಿವಾಸಿಯಾಗಿರುವ 58 ವರ್ಷದ ಜಯರಾಮ ರೈ ಕಳೆದ ಕೆಲವು ದಿನಗಳಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ವಾರದ ಹಿಂದಷ್ಟೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಬಂಟ್ವಾಳ ನಗರ ಠಾಣೆಯಲ್ಲಿ ಹಲವಾರು ವರ್ಷಗಳಿಂದ ಅಪರಾಧ ವಿಭಾಗದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದರು. ಕೆಲ ವರ್ಷಗಳ ಹಿಂದಷ್ಟೇ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದರು.