Corona Update- ಮಂಗಳೂರು: ಜಿಲ್ಲೆಯಲ್ಲಿ ಕೊರೋನಾ ಇಳಿಮುಖ, ಐವರ ಸಾವು
Thursday, May 13, 2021
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಸ್ವಲ್ಪ ಇಳಿಮುಖವಾಗಿದ್ದು, ಜನ ಕೊಂಚ ನಿರಾಳತೆಯ ನಿಟ್ಟುಸಿರು ಬಿಟ್ಟಿದ್ದಾರೆ.
ಆದರೆ, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಮಾತ್ರ ಹೆಚ್ಚಳವಾಗಿದ್ದು, ಇವತ್ತು ಕೋವಿಡ್‌ಗೆ ಐವರು ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಇಂದು 812 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 12,569ಕ್ಕೆ ಏರಿದೆ.
ಇದೇ ವೇಳೆ, 911 ಕೊರೋನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ಧಾರೆ.