Lock Down till June 7- ಕರ್ನಾಟಕದಲ್ಲಿ ಮತ್ತೆ 14 ದಿನ ಲಾಕ್‌ಡೌನ್: ಯಡಿಯೂರಪ್ಪ ಘೋಷಣೆ
Friday, May 21, 2021
ರಾಜ್ಯದಲ್ಲಿ ಕೋವಿಡ್ ಸೋಂಕಿನ ಅಬ್ಬರ ನಿಧಾನವಾಗಿ ಇಳಿಮುಖವಾಗುತ್ತಿದೆ. ಈ ಮಧ್ಯೆ, ಸೋಂಕನ್ನು ಸಂಪೂರ್ಣ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮತ್ತೆ 14 ದಿನಗಳ ಲಾಕ್‌ಡೌನ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಘೋಷಣೆ ಮಾಡಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ವರೆಗೆ ಖರೀದಿಗೆ ಅವಕಾಶ ನೀಡಲಾಗಿದೆ.
ಈ ಬಾರಿಯ ಲಾಕ್‌ಡೌನ್‌ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆಗೂ ಸೂಚನೆ ನೀಡಿದ್ದೇವೆ. ಜೂನ್ 7ರ ಬೆಳಿಗ್ಗೆ 6 ಗಂಟೆಯ ವರೆಗೆ ಲಾಕ್‌ಡೌನ್ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಸಚಿವರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಯಡಿಯೂರಪ್ಪ ಈ ಘೋಷಣೆ ಮಾಡಿದ್ದಾರೆ.
ಜೂನ್ 7ರ ವರೆಗೆ ಈಗ ಜಾರಿಯಲ್ಲಿರುವ ಮಾರ್ಗಸೂಚಿಯೇ ಜಾರಿಯಲ್ಲಿ ಇರುತ್ತದೆ. ಈ ಮಧ್ಯೆ, ಕೋವಿಡ್ ಚಿಕಿತ್ಸೆ ಪ್ರಕ್ರಿಯೆ ಎಂದಿನಂತೆ ಮುಂದುವರಿಲಿದೆ. ಜನರು ಕೋವಿಡ್ ನಿಯಂತ್ರಣದಲ್ಲಿ ನಮ್ಮ ಜೊತೆ ಕೈಜೋಡಿಸಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.