Mamatha Vs Modi - ಮಮತಾ ಎದುರು ಮೋದಿಗೆ ಮತ್ತೆ ಮುಖಭಂಗ!; ಪ.ಬಂ. ಮುಖ್ಯ ಕಾರ್ಯದರ್ಶಿ ರಾಜೀನಾಮೆ
ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹಿನ್ನಡೆ ಅನುಭವಿಸಿದ್ಧಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎದುರು ಮತ್ತೆ ಮುಖಭಂಗಕ್ಕೀಡಾಗಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ತಮಗೆ ಆಗಿರುವ ಅವಮಾನದ ಹಿನ್ನೆಲೆಯಲ್ಲಿ ಆ ರಾಜ್ಯದ ಮುಖ್ಯ ಕಾರ್ಯದರ್ಶಿಯನ್ನು ಕೇಂದ್ರ ಸೇವೆಗೆ ಕಳುಹಿಸುವಂತೆ ಮೋದಿ ಆದೇಶ ನೀಡಿದ್ದರು. ಈ ಆದೇಶವನ್ನು ಮರು ಪರಿಶೀಲಿಸುವಂತೆ ಮಮತಾ ಬ್ಯಾನರ್ಜಿ ಅವರು ಪ್ರಧಾನಿಯವರಲ್ಲಿ ವಿನಂತಿಸಿದ್ದರು. ಆದರೆ, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಸೊಪ್ಪು ಹಾಕಿರಲಿಲ್ಲ.
ಆದರೆ, ಸಿಎಸ್ ಅಲಪನ್ ಬಂದೋಪಾಧ್ಯಾಯ ಅವರನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದು ಮಮತಾ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಬರೆದ ಕೆಲವೇ ಗಂಟೆಗಳಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯ ಕಾರ್ಯದರ್ಶಿ ಅಲಪನ್ ಬಂದೋಪಾಧ್ಯಾಯ ರಾಜೀನಾಮೆ ನೀಡಿದ್ದಾರೆ.
ಇದೇ ವೇಳೆ, ಎಚ್. ಕೆ. ದ್ವಿವೇದಿ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ದೀದಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.