-->
Social Activist died- ಸಾಮಾಜಿಕ ಕಾರ್ಯಕರ್ತ ಎಂ. ದೇವದಾಸ್ ಇನ್ನಿಲ್ಲ

Social Activist died- ಸಾಮಾಜಿಕ ಕಾರ್ಯಕರ್ತ ಎಂ. ದೇವದಾಸ್ ಇನ್ನಿಲ್ಲ




ಮಂಗಳೂರಿನ ಹಿರಿಯ ಸಾಮಾಜಿಕ ಕಾರ್ಯಕರ್ತ ಎಂ. ದೇವದಾಸ್ ಮಣ್ಣಗುಡ್ಡ ಶನಿವಾರ ರಾತ್ರಿ ಕೊನೆಯುಸಿರೆಳೆದರು. ಮಂಗಳೂರಿನ ಕೊಟ್ಟಾರ ಚೌಕಿ ನಿವಾಸಿಯಾಗಿದ್ದಅವರಿಗೆ 63 ವರ್ಷ ವಯಸ್ಸಾಗಿತ್ತು.



ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಪತ್ನಿ ಮತ್ತು ಓರ್ವ ಮಗನನ್ನು ಅಗಲಿದ್ದಾರೆ.



ಮಂಗಳೂರಿನ ಕೊಣಾಜೆಯಲ್ಲಿ ವೃದ್ಧಾಶ್ರಮವನ್ನು ನಡೆಸುತ್ತಿದ್ದ ಅವರು, ದೇವಾಡಿಗ ಸಂಘದ ಕಾರ್ಯಚಟುವಟಿಕೆಗಳಲ್ಲಿ ಅವರು ಸದಾ ಕ್ರಿಯಾಶೀಲರಾಗಿದ್ದರು. 


ಅಲ್ಲದೆ, ಹಲವು ಜನಪರ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದರು. ಕೊಡುಗೈ ದಾನಿಯೂ ಆಗಿದ್ದ ದೇವದಾಸ್, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಳಕಳಿಯನ್ನು ಹೊಂದಿದ್ದರು.





ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿಯಾಗಿದ್ದ ಅವರು, ಕೆನರಾ ಕಾಲೇಜಿನಲ್ಲಿ ಲ್ಯಾಬ್ ಅಸಿಸ್ಟಂಟ್ ಆಗಿ ದಶಕಗಳ ಕಾಲ ಕಾರ್ಯನಿರ್ವಹಿಸಿದ್ದರು.



ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯಿಲಿ ಅವರ ನಿಕಟವರ್ತಿಯೂ ಆಗಿದ್ದ ದೇವದಾಸ್ 2008ರ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದರು.



ದೇವದಾಸ್ ಅವರ ನಿಧನಕ್ಕೆ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.



Ads on article

Advertise in articles 1

advertising articles 2

Advertise under the article