1 lakh relief to covid victim family- 'ಕೊರೋನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಸ್ಥರಿಗೆ 1 ಲಕ್ಷ ರೂ. ಪರಿಹಾರ'
ಬೆಂಗಳೂರು: ಕೊರೋನಾದಿಂದಾಗಿ ದುಡಿಯುವ ವ್ಯಕ್ತಿಗಳು ಮೃತಪಟ್ಟು ಸಾಕಷ್ಟು ಕುಟುಂಬಗಳು ಅನಾಥವಾಗಿವೆ. ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರವು ಆಪ್ತರನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಕೋವಿಡ್ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದೆ.
ಕೊರೋನಾದಿಂದ ಬಿಪಿಎಲ್ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ, ಅವರ ಕುಟುಂಬಕ್ಕೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ ಪ್ರಕಡಿಸಿದ್ದಾರೆ. ಈ ಬಗ್ಗೆ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ.
ದುಡಿಯುವ ವ್ಯಕ್ತಿಗಳು ಕೋವಿಡ್-19 ಸೋಂಕಿನಿಂದ ಮೃತಪಟ್ಟು ಅನೇಕ ಕುಟುಂಬಗಳು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದೆ. ಇದನ್ನು ಮನಗಂಡು, ಬಿಪಿಎಲ್ ಕುಟುಂಬಗಳಲ್ಲಿ ಕೋವಿಡ್ ಸೋಂಕಿನಿಂದ ವಯಸ್ಕರು ಮೃತಪಟ್ಟಲ್ಲಿ, ಆ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ಧಾರೆ.
ಆದರೆ, ಪ್ರತಿ ಕುಟುಂಬದ ಗರಿಷ್ಟ ಒಬ್ಬ ವ್ಯಕ್ತಿಯ ಸಾವಿಗೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.