
Court Staff died- ಪುತ್ತೂರು: 2 ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಕೋರ್ಟ್ ಸಿಬ್ಬಂದಿ ಸಾವು
ಮಂಗಳೂರು: ಎರಡು ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ್ ಮೃತಪಟ್ಟವರು. ಅಕ್ಷತಾ ಅವರೂ ನ್ಯಾಯಾಲಯದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಎರಡು ತಿಂಗಳ ಹಿಂದೆಯಷ್ಟೆ ಅವರು ಮಗುವಿಗೆ ಜನ್ಮ ನೀಡಿದ ಬಳಿಕ ಅನಾರೋಗ್ಯದಿಂದಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಅಕ್ಷತಾ ಅವರು ಪುತ್ತೂರು ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂಬಂಧಿಸಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಅಕ್ಷತಾರ ತವರು ಮನೆ ಉಪ್ಪಿನಂಗಡಿಯಾಗಿದ್ದು, ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯಲ್ಲಿ ಬಿಕಾಂ ಪದವಿಯನ್ನು ಪಡೆದಿದ್ದರು.
ಮೃತರು ಪತಿ ದಿಲೀಪ್, ಮಗು ಅವರನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.