Covid helping hand by ex Minister- ಲಾಕ್ ಡೌನ್ ಸಂತ್ರಸ್ತರಿಗೆ ಊಟದ ವ್ಯವಸ್ಥೆ: ಮಾಜಿ ಸಚಿವರ ಮಾನವೀಯ ಸೇವೆ
Monday, June 7, 2021
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಲಾಕ್‌ಡೌನ್ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುವಲ್ಲಿ ಮಾಜಿ ಸಚಿವ ರಮಾನಾಥ ರೈ ಹಗಲಿರುಳು ಎನ್ನದೆ ಶ್ರಮಿಸುತ್ತಿದ್ದಾರೆ. ಜೀವನವೇ ದುಸ್ತರ ಎನ್ನುವಂತೆ ಜನ ಕಂಗಾಲಾಗಿರುವಾಗ ಮಾಜಿ ಸಚಿವರ ಮಾನವೀಯ ಸೇವೆ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.
ಕೋವಿಡ್ ಚಟುವಟಿಕೆಯಲ್ಲಿ ನಿರತರಾಗಿರುವ ಆಶಾ ಕಾರ್ಯಕರ್ತರಿಗೆ ದಿನಸಿ ಕಿಟ್ ನೀಡಿರುವ ರೈ, ಹಲವು ತಿಂಗಳಿನಿಂದ ವೇತನ ಇಲ್ಲದೆ ಪರದಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಧೈರ್ಯ ತುಂಬಿದ್ದಾರೆ.
ಇನ್ನು ಬಿ.ಸಿ.ರೋಡ್, ಪಾಣೆಮಂಗಳೂರು ಸೇರಿದಂತೆ ಹಲವೆಡೆ ಉಚಿತ ಊಟ ಹಾಗೂ ಉಪಹಾರದ ವ್ಯವಸ್ಥೆಯನ್ನೂ ಮಾಡಿದ್ಧಾರೆ.
ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು ಹೀಗೆ ಎಲ್ಲ ವಿಭಾಗದವರ ಸಂಕಷ್ಟಗಳಿಗೂ ಅವರು ಸ್ಪಂದಿಸಿ ತಮ್ಮ ಕೈಯಿಂದ ಸಾಧ್ಯವಿರುವ ಎಲ್ಲ ನೆರವನ್ನೂ ನೀಡುತ್ತಿದ್ದಾರೆ.
ಪಕ್ಷಭೇದ ಮರೆತು ರಮಾನಾಥ ರೈ ಅವರು ಮಾಡುತ್ತಿರುವ ಬಿಡುವಿಲ್ಲದ ಸಾಮಾಜಿಕ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.