Fuel Hike Protest- ದ.ಕ. ಜಿಲ್ಲೆಯಾದ್ಯಂತ ಪೆಟ್ರೋಲ್, ಡೀಸಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿವಿಧೆಡೆ ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗಳು ಸತತ ನಾಲ್ಕನೇ ದಿನವೂ ಮುಂದುವರಿದಿದೆ. ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸಿದ್ದಾರೆ.
ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಡಿವೈಎಫ್ಐ ವಿಟ್ಲ ಕಾರ್ಯಕರ್ತರು ಮಂಗಳಪದವು ಪೆಟ್ರೋಲ್ ಪಂಪ್ ಮುಂಭಾಗ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.(ಎಂ )ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಚ್ಚಾ ತೈಲದ ಬೆಲೆ ಇಳಿಕೆಯಾದರೂ ಕೇಂದ್ರ ಸರಕಾರ ತೈಲ ಬೆಲೆ ಇಳಿಸದೆ ಜನರನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.
ಅಚ್ಚೇ ದಿನದ ಹೆಸರಿನಲ್ಲಿ ಜನರ ಬದುಕನ್ನು ನಿರ್ನಾಮ ಮಾಡಲು ಹೊರಟ ಬಿ.ಜೆ.ಪಿ ಸರಕಾರದ ವಿರುದ್ಧ ಜನತೆ ದೊಡ್ಡ ಮಟ್ಟದ ಜನಾಂದೋಲನ ನಡೆಸಬೇಕು ಎಂದು ಕರೆ ನೀಡಿದರು. ಪ್ರತಿಭಟನೆ ವೇಳೆ ಜೀಪ್ ಒಂದಕ್ಕೆ ಹಗ್ಗ ಕಟ್ಟಿ ಎಳೆಯುವುದರ ಮೂಲಕ ವಿನೂತನವಾಗಿ ಪ್ರತಿಭಟನೆ ಆರಂಭಿಸಲಾಯಿತು.
ಈ ವೇಳೆ ಡಿವೈಎಫ್ಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ತುಳಸೀದಾಸ್ ವಿಟ್ಲ, ರಿಕ್ಷಾ ಚಾಲಕರ ಸಂಘದ ಕಾರ್ಯದರ್ಶಿ ರಜಾಕ್ ಕೆಲಿಂಜ , ಡಿವೈಎಫ್ಐ ವಿಟ್ಲ ವಲಯ ಮುಖಂಡರಾದ ಸಲೀಂ ಮಲ್ಲಿಕ್, ಸಲ್ಮಾನ್ ಪಿ.ಬಿ., ಜಮೀಲ್, ಇರ್ಫಾನ್ ,ಇಬ್ರಾಹಿಂ ಬಾಸಿಂ ನೇತೃತ್ವ ವಹಿಸಿದ್ದರು.
ಸುಲೇಮಾನ್ ಪೆಲತ್ತಡ್ಕ, ಹನೀಫ್ ಕೆಲಿಂಜ, ಹನೀಫ್ ಆಲಂಗಾರ್, ಸಮೀರ್ ಪಾತ್ರತೋಟ, ಸಾಬಿತ್ ಕೆಲಿಂಜ, ಅಜೀಜ್ ಕೆಳಿಂಜ, ಸಿನಾನ್, ಅಜೀಜ್ ಪೆಲತ್ತಡ್ಕ, ಸವಾದ್ ಕೋಲ್ಪೆ , ಶಾಕೀರ್ ಖಾನ್, ಲಿಯಾಕತ್ ಖಾನ್, ಮೊಹಿದೀನ್ ಕೆದುಮೂಲೆ ಮುಂತಾದವರು ಈ ವೇಳೆ ಉಪಸ್ಥಿತರಿದ್ದರು.