
KSRTC service begins- ಸೋಮವಾರದಿಂದ ಕೆಎಸ್ಸಾರ್ಟಿಸಿ ಬಸ್ ಸಂಚಾರ: ಯಾವ ಜಿಲ್ಲೆಯಲ್ಲಿ ಬಸ್ ಇರಲಿದೆ?
Sunday, June 20, 2021
ಬೆಂಗಳೂರು: ಕೋವಿಡ್ 19 ಸೋಂಕು ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಸೋಮವಾರದಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ( ಕೆಎಸ್‌ರ್ಟಿಸಿ ) ಬಸ್‌ಗಳೂ ರಸ್ತೆಗೆ ಇಳಿಯಲಿವೆ.
ಸೋಮವಾರದಿಂದ ರಾಜ್ಯದಲ್ಲಿ ಮೈಸೂರು ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲೂ ಸಾರಿಗೆ ಸಂಸ್ಥೆ ಬಸ್ ಸಂಚಾರ ನಡೆಸಲಿವೆ. ಮೊದಲ ದಿನ ಸುಮಾರು 3 ಸಾವಿರ ಬಸ್ ಗಳು ರಸ್ತೆಗಿಳಿಯಲಿವೆ ಎಂದು ಸಾರಿಗೆ ಸಂಸ್ಥೆಯ ಮಾಹಿತಿ ದೊರೆತಿದೆ.
ಶೇಕಡಾ 50ರಷ್ಟು ಪ್ರಯಾಣಿಕರಿಗೆ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಅವಕಾಶ ನೀಡಲಾಗಿದೆ. ಮೈಸೂರು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿ ಸಡಿಲಿಕೆ ಮಾಡಲಾಗಿರುವ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಗಳು ರಸ್ತೆಗಿಳಿಯಲು ಸಜ್ಜಾಗಿವೆ ಎಂದು ಕೆಎಸ್ಸಾರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.