Lockdown till June 14- ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ: ಸಿಎಂ ಆದೇಶ
Thursday, June 3, 2021
ರಾಜ್ಯದ ಜನರಿಗೆ ಮತ್ತೊಂದು ವಾರ ಲಾಕ್‌ಡೌನ್ ಬಿಸಿ ಮುಂದುವರಿಯಲಿದೆ. ಕೊರೋನಾ ಸೋಂಕು ಇಳಿಮುಖವಾಗುತ್ತಿದೆ. ಆದರೆ, ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳುವವರೆಗೆ ಮತ್ತು ಸೋಂಕಿನ ಸರಪಣಿ ಮುರಿಯುವವರೆಗೆ ಲಾಕ್‌ಡೌನ್ ಅನಿವಾರ್ಯ ಎಂದು ಸಿಎಂ ಯಡಿಯೂರಪ್ಪ ಹೇಳಿದ್ಧಾರೆ.
ಈ ಹಿನ್ನೆಲೆಯಲ್ಲಿ ಇನ್ನೊಂದು ವಾರ ಲಾಕ್‌ಡೌನ್ ಮುಂದುವರಿಯಲಿದೆ. ರಫ್ತು ಸಂಬಂಧಿತ ವ್ಯಾಪಾರ ಚಟುವಟಿಕೆಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಈಗ ಜಾರಿಯಲ್ಲಿರುವ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಪರಿಣಿತರು ನೀಡಿರುವ ಸಲಹೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ದಿನಾಂಕ 14ರ ಬೆಳಿಗ್ಗೆ 6 ಗಂಟೆಯವರೆಗೆ ಈ ಲಾಕ್‌ಡೌನ್ ಮುಂದುವರಿಯಲಿದೆ.
ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಲಾಕ್‌ಡೌನ್ ಜಾರಿಗೆ ಸೂಕ್ತ ಕ್ರಮ ಕೈಗೊಳ್ಳಿದ್ದಾರೆ ಎಂದು ಅವರು ಹೇಳಿದ್ದಾರೆ.