-->
No change in leadership-BSY; ನಾನು ಪೂರ್ಣಾವಧಿ ಮುಖ್ಯಮಂತ್ರಿ: ವಿರೋಧಿಗಳಿಗೆ ಯಡಿಯೂರಪ್ಪ ತಿರುಗೇಟು

No change in leadership-BSY; ನಾನು ಪೂರ್ಣಾವಧಿ ಮುಖ್ಯಮಂತ್ರಿ: ವಿರೋಧಿಗಳಿಗೆ ಯಡಿಯೂರಪ್ಪ ತಿರುಗೇಟು





ಹಾಸನ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ, ಪಕ್ಷದೊಳಗಿನ ತಮ್ಮ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.


ಹಾಸನದಲ್ಲಿ ಮಾತನಾಡಿದ ಅವರು, ನಾನು ಪೂರ್ಣಾವಧಿ ಮುಖ್ಯಮಂತ್ರಿ. ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ಈ ಬಗ್ಗೆ ಜನರಿಗೆ ಭರವಸೆ ನೀಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.


ನನ್ನ ನೇತೃತ್ವದಲ್ಲಿ ರಾಜ್ಯದಲ್ಲಿ ಸಾಕಷ್ಟು ಉತ್ತಮ ಕೆಲಸಗಳಾಗಿವೆ. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಬೇಕು ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ ಎಂದು ಅವರು ಹೇಳಿದರು.


ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೂ ನನ್ನ ಮೇಲೆ ಅಪಾರ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ನಾನು ರಾಜ್ಯದಲ್ಲಿ ಗರಿಷ್ಟ ಪ್ರಮಾಣದಲ್ಲಿ ಸೇವೆ ಸಲ್ಲಿಸಬೇಕು, ಹೆಚ್ಚಿನ ಜನಪರ ಕೆಲಸಗಳನ್ನು ಮಾಡಬೇಕು ಎಂದು ಹೇಳಿದರು.


ಅರುಣ್ ಸಿಂಗ್ ಅವರು ಬಿಜೆಪಿ ರಾಜ್ಯ ಉಸ್ತುವಾರಿಯಾಗಿದ್ದು, ಜೂನ್ 16ಕ್ಕೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಯಕತ್ವ ಬದಲಾವಣೆ ಇಲ್ಲ, ಈ ವಿಚಾರವಾಗಿ ಯಾವುದೇ ಗೊಂದಲ ಇಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article