Vedavyasa kamath- ಮಂಗಳೂರು: ಗಾಂಧಿನಗರ ಲಸಿಕಾ ಕೇಂದ್ರಕ್ಕೆ ಶಾಸಕ ವೇದವ್ಯಾಸ ಕಾಮತ್ ಭೇಟಿ
ಲೇಡಿಹಿಲ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಲಸಿಕಾ ಕೇಂದ್ರ ಗಾಂಧಿನಗರ ಶಾಲೆಯಲ್ಲಿ ನಡೆಯುತ್ತಿದ್ದು, ಸ್ಥಳಕ್ಕೆ ಸ್ಥಳೀಯ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ನಮ್ಮ ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೂ ಲಸಿಕೆ ಕೊಡಿಸುತ್ತೇವೆ. ಅನಗತ್ಯ ವದಂತಿಗಳಿಗೆ ಕಿವಿಗೊಡಗೆ ಜನತೆ ಸಹಕರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಲಸಿಕಾ ಕೇಂದ್ರಗಳ ವ್ಯವಸ್ಥೆಯಲ್ಲಿ ಒಂದಷ್ಟು ಬದಲಾವಣೆಗಳನ್ನು ತರಬೇಕಿದೆ. ಸಾರ್ವಜನಿಕರಿಗೆ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಕೆಲವೊಂದು ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಅಪರ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು, ಜಯಲಕ್ಷ್ಮಿ ಶೆಟ್ಟಿ, ಸಂಧ್ಯಾ ಮೋಹನ್ ಆಚಾರ್, ಗಣೇಶ್ ಕುಲಾಲ್ ಉಪಸ್ಥಿತರಿದ್ದರು.