-->
Vaccine misuse- ಬಿಜೆಪಿ ಶಾಸಕನ ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ: ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯೆ ಹೀಗಿದೆ..

Vaccine misuse- ಬಿಜೆಪಿ ಶಾಸಕನ ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ: ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯೆ ಹೀಗಿದೆ..



ಲಸಿಕೆ ಬಗ್ಗೆ ಎಲ್ಲರೂ ಕಾತರದಿಂದ ಕಾಯುತ್ತಿರುವ ಸಂದರ್ಭದಲ್ಲೇ ಆಡಳಿತಾರೂಢ ಬಿಜೆಪಿ ಸರ್ಕಾರದ ಶಾಸಕರೊಬ್ಬರ ಮೇಲೆ ಲಸಿಕೆ ದುರ್ಬಳಕೆ ಕುರಿತ ಗಂಭೀರ ಆರೋಪ ಎದುರಾಗಿದೆ.




ಬೆಂಗಳೂರಿನ ಸಿ. ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ಬಿಜೆಪಿ ಶಾಸಕ ಎಸ್. ರಘು ಅವರ ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ಈ ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.



ಭುವನೇಶ್ವರಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ಲಸಿಕಾ ಕಾರ್ಯಕ್ರಮವನ್ನು ರದ್ದುಗೊಳಿಸಿ, ಸಮೀಪದ ಕಲ್ಯಾಣ ಮಂಟಪವೊಂದರಲ್ಲಿ ಶಾಸಕ ರಘು ಅವರು ತಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಸಂಬಂಧಿಕರಿಗೆ ಲಸಿಕೆ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.




ಸಾರ್ವಜನಿಕ ಪ್ರದೇಶಗಳಲ್ಲಿ, ಕಲ್ಯಾಣ ಮಂಟಪಗಳಲ್ಲಿ ಲಸಿಕೆ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡಲಾಗುತ್ತಿರುವ ಲಸಿಕೆಗಳನ್ನು ಆದ್ಯತೆಯ ಆಧಾರದ ಮೇಲೆ ಜನರಿಗೆ ನೀಡಬೇಕು. ಘಟನೆ ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರೊಂದಿಗೆ ಮಾತುಕತೆ ನಡೆಸುತ್ತೇನೆ. ಒಂದು ವೇಳೆ ತಪ್ಪುಗಳಾಗಿರುವುದು ಕಂಡು ಬಂದರೆ ಸೂಕ್ತ ಕ್ರಮವನ್ನು ಜರಗಿಸುವುದಾಗಿ ಸಚಿವರು ಹೇಳಿದರು.

Ads on article

Advertise in articles 1

advertising articles 2

Advertise under the article