Corona Update- ಕರ್ನಾಟಕದಲ್ಲಿ ಕೊರೋನಾ ಸೋಂಕು ಏರಿಕೆ: ಇಂದು ಮೂರು ಸಾವಿರಕ್ಕೂ ಅಧಿಕ ಪ್ರಕರಣ
ಇಂದು ಒಟ್ಟು 3,104 ಹೊಸ ಕೇಸ್ ಪತ್ತೆ
ರಾಜ್ಯದಲ್ಲಿ 92 ಸಾವು, 4,992 ಮಂದಿ ಆಸ್ಪತ್ರೆಯಿಂದ ಬಿಡುಗಡೆ
ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕೊಂಚ ಏರಿಕೆ ಕಂಡಿದೆ. ಇಂದು ಒಟ್ಟು 3,104 ನೂತನ ಪ್ರಕರಣಗಳು ಪತ್ತೆಯಾಗಿದೆ. ಒಟ್ಟು 92 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ವೇಳೆ, 4,992 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸದ್ಯ ರಾಜ್ಯದಲ್ಲಿ ಒಟ್ಟು 40,016 ಸಕ್ರಿಯ ಪ್ರಕರಣಗಳಿವೆ. ಕೋವಿಡ್-19 ಸೋಂಕಿನ ಪಾಸಿಟಿವಿಟಿ ದರ ಶೇ. 2.65ರಷ್ಟಿದೆ. ಒಟ್ಟು ಸೋಂಕಿತರ ಪೈಕಿ ಮರಣ ಪ್ರಮಾಣ ಶೇ.2.96ರಷ್ಟು ದಾಖಲಾಗಿದೆ.
ಕೊರೋನಾ ವೈರಸ್‌ಗೆ ರಾಜ್ಯದಲ್ಲಿ ಒಟ್ಟು 35,526 ಮಂದಿ ಬಲಿಯಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 28.5 ಲಕ್ಷಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಟ್ಟು 216 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣ 2835. ಇಂದು ಒಟ್ಟು 13 ಮಂದಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದರೆ, 613 ಮಂದಿ ಸೋಂಕು ಮುಕ್ತವಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 3.31 ಆಗಿದೆ.