Covid update- ಮತ್ತೆ ಲಾಕ್‌ಡೌನ್ ಭೀತಿ ವದಂತಿ ನಡುವೆ ಕೊರೋನಾ ಸೋಂಕು ಇಳಿಮುಖ
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಒಂದು ಅಂಕಿಗೆ ಇಳಿದ ಕೊರೋನಾ ಸಂಖ್ಯೆ... ಏಳು ಜಿಲ್ಲೆಗಳಲ್ಲಿ ಕೋವಿಡ್ ಮರಣ ಸಂಖ್ಯೆ ಶೂನ್ಯಕ್ಕೆ... ಕರಾವಳಿ ಸೇರಿದಂತೆ ರಾಜ್ಯದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.
ಮತ್ತೆ ಲಾಕ್‌ಡೌನ್ ಭೀತಿ ಎಂಬ ವದಂತಿ ನಡುವೆ ರಾಜ್ಯದ ಜನರು ನಿರಾಳರಾಗಲಿದ್ದಾರೆ.
ರಾಜ್ಯದಲ್ಲಿ ಇಂದು 1,386 ಹೊಸ ಸೋಂಕು ಪತ್ತೆಯಾಗಿದೆ. ಇದೇ ವೇಳೆ, 3,204 ಮಂದಿ ಸೋಂಕಿನಿಂದ ಬಿಡುಗಡೆಗೊಂಡು ಆಸ್ಪತ್ರೆಯಿಂದ ಹೊರಬಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.26ಕ್ಕೆ ಇಳಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೊರೋನಾ ಸೋಂಕು ಗಣನೀಯ ಇಳಿಕೆ ಕಂಡುಬಂದಿದೆ. ಇಂದು ಕೇವಲ 126 ಮಂದಿಯಲ್ಲಿ ಕೊರೋನಾ ಸೋಂಕು ಲಕ್ಷಣಗಳು ಪತ್ತೆಯಾಗಿದೆ. ಇದೇ ವೇಳೆ, 289 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ಧಾರೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 2.19ಕ್ಕೆ ಇಳಿದಿದೆ.
ಆದರೆ, ಸೋಂಕಿನಿಂದ ಮೃತರಾದವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಇಂದು 10 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ, ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಸಾವಿನ ಸಂಖ್ಯೆ 1325ಕ್ಕೇರಿದೆ.
ಉಡುಪಿ ಜಿಲ್ಲೆಯಲ್ಲೂ ಸೋಂಕು ಇಳಿಮುಖವಾಗಿದೆ. 66 ಮಂದಿಗೆ ಸೋಂಕು ತಗುಲಿದ್ದು, ಒಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ. 130 ಮಂದಿ ಸೋಂಕಿನಿಂದ ಮುಕ್ತಿ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.