-->
12 BJP MLA's Suspended- 12 ಬಿಜೆಪಿ ಶಾಸಕರು ಸಸ್ಪೆಂಡ್: ಅಮಾನತು ಆದೇಶ ಹೊರಡಿಸಿದ ಸ್ಪೀಕರ್!

12 BJP MLA's Suspended- 12 ಬಿಜೆಪಿ ಶಾಸಕರು ಸಸ್ಪೆಂಡ್: ಅಮಾನತು ಆದೇಶ ಹೊರಡಿಸಿದ ಸ್ಪೀಕರ್!





ಮಹಾರಾಷ್ಟ್ರ ವಿಧಾನಸಭೆಯ ಕಲಾಪದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಸಿದ್ದು, ಗದ್ದಲದ ಮಧ್ಯೆ 12 ಮಂದಿ ಭಾರತೀಯ ಜನತಾ ಪಕ್ಷದ ಶಾಸಕರನ್ನು ಸದನದಿಂದ ಅಮಾನತು ಮಾಡಲಾಗಿದೆ. ಸ್ಪೀಕರ್ ಜಿರ್ವಾಲ್ ನರಹರಿ ಸೀತಾರಾಮ್ ಅವರು ಈ ಆದೇಶ ಹೊರಡಿಸಿದ್ದಾರೆ.



 ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಬ್ ಅವರು ಬಿಜೆಪಿ ಶಾಸಕರನ್ನು ಅಮಾನತು ಮಾಡುವ ಕುರಿತು ಮಂಡಿಸಿದ ನಿಲುವಳಿ ಸೂಚನೆಗೆ ಸದನ ಧ್ವನಿಮತದ ಮೂಲಕ ಅಂಗೀಕಾರ ನೀಡಿತು.



ಸೋಮವಾರ ವಿಧಾನಸಭೆಯ ಕಲಾಪ ನಡೆಯುತ್ತಿರುವ ವೇಳೆ, ಸದನದಲ್ಲಿ ಭಾರೀ ಗದ್ದಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಸ್ಪೀಕರ್ ಈ ಕಠಿಣ ಕ್ರಮ ಕೈಗೊಂಡಿದ್ದಾರೆ.



ಇದಕ್ಕೂ ಮುನ್ನ ಸ್ಪೀಕರ್ ಆಗಿರುವ ಶಿವಸೇನಾ ಶಾಸಕ ಭಾಸ್ಕರ್ ಜಾದವ್ ಅವರನ್ನು ಉಪ ಸ್ಪೀಕರ್ ಕಚೇರಿಯಲ್ಲಿ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು ಹಾಗೂ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದರು. ಘಟನೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉಪಸ್ಥಿತರಿದ್ದರೂ ಯಾವುದೇ ಪ್ರತಿರೋಧ ತೋರಿರಲಿಲ್ಲ ಎಂದು ವರದಿಯಾಗಿದೆ.


ಗೊಂದಲ, ಗದ್ದಲ ಸೃಷ್ಟಿಸಿದ 12 ಬಿಜೆಪಿ ಶಾಸಕರನ್ನು ಒಂದು ವರ್ಷದ ಮಟ್ಟಿಗೆ ಅಮಾನತು ಮಾಡಲಾಗಿದೆ.


ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಎನ್‌ಸಿಪಿ ನಾಯಕ ನವಾಬ್ ಮಲ್ಲಿಕ್, ಬಿಜೆಪಿ ಶಾಸಕರ ವರ್ತನೆ ಪ್ರಜಾಪ್ರಭುತ್ವಕ್ಕೆ ಆತಂಕಕಾರಿಯಾಗಿದೆ. ಇಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ. ಮತ್ತು ಸ್ಪೀಕರ್ ಕ್ರಮ ಸರಿಯಾದ ದಾರಿಯಲ್ಲಿ ಇದೆ ಎಂದು ಸಮರ್ಥಿಸಿಕೊಂಡಿದ್ದಾರೆ.


ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ ದೇವೇಂದ್ರ ಫಡ್ನವಿಸ್, ಶಾಸಕರು ಅನುಚಿತ ವರ್ತನೆಯ ಬಗ್ಗೆ ಸ್ಪೀಕರ್ ಅವರಲ್ಲಿ ಕ್ಷಮೆಯಾಚನೆ ಮಾಡಿದ್ದಾರೆ. ಹಾಗಾಗಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವುದನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.

Ads on article

Advertise in articles 1

advertising articles 2

Advertise under the article