
Oscar Fernandes- ವದಂತಿಗೆ ಕಿವಿಗೊಡದಿರಿ: ಆಸ್ಕರ್ ಚೇತರಿಸಿಕೊಳ್ಳುತ್ತಿದ್ದಾರೆ..!
ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರಿನ್ನೂ ಮಂಗಳೂರಿನ ಯೆನೆಪೋಯಾ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
READ
ಈ ಮಧ್ಯೆ, ಅವರು ಮೃತಪಟ್ಟಿದ್ದಾರೆ ಎಂಬ ಗಾಳಿ ಸುದ್ದಿ ಹಬ್ಬಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಅವರು ಇನ್ನೂ ಜೀವಂತರಾಗಿದ್ದಾರೆ. ಈ ವದಂತಿ ಬಗ್ಗೆ ಯಾರೂ ಕಿವಿಗೊಡದಿರಿ. ಅವರ ಆರೋಗ್ಯಕ್ಕೆ ಪ್ರಾರ್ಥನೆ ಮಾಡಿ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸರ್ವಧರ್ಮೀಯರು ಪ್ರಾರ್ಥನೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಉಸ್ತುವಾರಿ ಸಚಿವ ರಮಾನಾಥ ರೈ ಸೇರಿದಂತೆ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಚಿಕಿತ್ಸೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ಧಾರೆ.