
reservation for transgender in Govt Job- ಸರ್ಕಾರಿ ನೌಕರಿ, ನೇಮಕದಲ್ಲಿ ತೃತೀಯ ಲಿಂಗಿಗಳಿಗೆ ಶೇ. 1ರಷ್ಟು ಮೀಸಲಾತಿ: ಹೈಕೋರ್ಟ್ ಪ್ರಶಂಸೆ
ರಾಜ್ಯ ಸರ್ಕಾರದ ನೌಕರಿಯಲ್ಲಿ ಶೇಕಡಾ 1ರಷ್ಟನ್ನು ತೃತೀಯ ಲಿಂಗಿಗಳಿಗೆ ನೀಡಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದೆ.
ಕೆಲವು ರಾಜ್ಯಗಳಲ್ಲಿ ಅಲ್ಪ ಮೀಸಲಾತಿ ಕಲ್ಪಿಸಲಾಗಿದೆ. ಆದರೆ, ತೃತೀಯ ಲಿಂಗಿಗಳಿಗೆ ಶೇಕಡಾ 1ರಷ್ಟು ಮೀಸಲಾತಿ ಕಲ್ಪಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.
ಪೊಲೀಸ್ ಇಲಾಖೆಯಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ ಕಲ್ಪಿಸಬೇಕು ಎಂಬ ನೆಲೆಯಲ್ಲಿ ಸಂಗಮ ಎಂಬ ಸ್ವಯಂ ಸೇವಾ ಸಂಸ್ಥೆ ಕಾನೂನು ಮೆಟ್ಟಿಲೇರಿತ್ತು.
ಸಂಸ್ಥೆ ಹಾಕಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ಬಗ್ಗೆ ಸರ್ಕಾರದಿಂದ ಮಾಹಿತಿ ಕೋರಿತ್ತು.
ಆದರೆ, ರಾಜ್ಯ ಸರ್ಕಾರ ಮಾತ್ರ ಅವರು ಬಯಸಿದ್ದಕ್ಕಿಂತ ಹೆಚ್ಚಿನ ಮೀಸಲಾತಿ ಪ್ರಕಟಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ರಾಜ್ಯ ಸರ್ಕಾರ ತನ್ನ ಎಲ್ಲ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇಕಡಾ 1ರಷ್ಟು ಸಮತಲ ಮೀಸಲಾತಿ ಕಲ್ಪಿಸಲು ನೇಮಕಾತಿ ನಿಯಮ- 1977ಗೆ ತಿದ್ದುಪಡಿ ತಂದು ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದು ಸರ್ಕಾರದ ಪರ ವಕೀಲರಾದ ವಿಜಯ ಕುಮಾರ್ ಪಾಟೀಲ್ ಹೈಕೋರ್ಟ್‌ಗೆ ಲಿಖಿತ ಮಾಹಿತಿ ನೀಡಿದ್ಧಾರೆ.
ಈ ವಿವರವನ್ನು ದಾಖಲಿಸಿಕೊಂಡ ರಾಜ್ಯ ಹೈಕೋರ್ಟ್, ಸರ್ಕಾರದ ಕ್ರಮವನ್ನು ಪ್ರಶಂಸಿಸಿದೆ.