-->
Food processing Industry- ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳಿಗೆ ಸಾಲ: ಇಲ್ಲಿದೆ ಮಹತ್ವದ ಮಾಹಿತಿ..

Food processing Industry- ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳಿಗೆ ಸಾಲ: ಇಲ್ಲಿದೆ ಮಹತ್ವದ ಮಾಹಿತಿ..



ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿರುವ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.



ಸಂಪನ್ಮೂಲ ವ್ಯಕ್ತಿಗಳಿಗೆ ಯಾವುದೇ ವೇತನ ಪಾವತಿಸುವುದಿಲ್ಲ, ಆದರೆ ಸಂಪನ್ಮೂಲ ವ್ಯಕ್ತಿಗಳಿಗೆ ನೀಡಲಾಗುವ ಹಣ ಪಾವತಿಯನ್ನು ಅವರು ಬೆಂಬಲಿಸಿರುವಂತಹ ಪ್ರತಿ ಫಲಾನುಭವಿಯನ್ನು ಆಧರಿಸಿ ಬ್ಯಾಂಕಿನಿಂದ ಸಾಲ ಮಂಜೂರಾತಿ ಆದ ನಂತರ ಬ್ಯಾಂಕಿನಿಂದ ಮಂಜೂರಾದ ಪ್ರತಿ ಸಾಲವನ್ನು ಆಧರಿಸಿ 20 ಸಾವಿರ ರೂ. ಗಳನ್ನು 2 ಕಂತುಗಳಲ್ಲಿ ಪಾವತಿಸಲಾಗುತ್ತದೆ.








ಈ ಪೈಕಿ ಶೇ. 50 ಮೊತ್ತವನ್ನು ಬ್ಯಾಂಕಿನಿಂದ ಸಾಲ ಮಂಜೂರಾದ ನಂತರ ಹಾಗೂ ಉಳಿದ 50% ಹಣವನ್ನು ಘಟಕಗಳು ಜಿಎಸ್‍ಟಿ ಮತ್ತು ಉದ್ಯೋಗ ಆಧಾರ್ ನೋಂದಣಿಗಳನ್ನು ಪಡೆದ ನಂತರ ಎಫ್.ಎಸ್.ಎಸ್.ಎ.ಐ. ವತಿಯಿಂದ ಪ್ರಾಮಾಣಿಕೃತ ಅನುಸರಣೆಯನ್ನು ಪಡೆದ ನಂತರ ನೀಡಲಾಗುತ್ತದೆ.


ಯಾವೆಲ್ಲ ಅರ್ಹತೆಗಳು ಇರಬೇಕು?

ಆಹಾರ ತಂತ್ರಜ್ಞಾನ ಆಹಾರ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ಅಥವಾ ಪದವಿ ಪ್ರತಿಷ್ಠಿತ ರಾಷ್ಟ್ರ ಅಥವಾ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯ ಸಂಸ್ಥೆಗಳಿಂದ, ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟದ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ 3 ರಿಂದ 5 ವರ್ಷ ಅನುಭವವಿರಬೇಕು...


ಆಹಾರ ಸಂಸ್ಕರಣೆ, ಕೈಗಾರಿಕೆ, ಬ್ಯಾಂಕಿಂಗ್, ಡಿಪಿಆರ್ ಸಿದ್ಧಪಡಿಸುವಿಕೆ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ವ್ಯಕ್ತಿಯನ್ನು ಪರಿಗಣಿಸಲಾಗುವುದು, ಕೃಷಿ ಮತ್ತು ಸಂಬಂಧಿತ ವಿಷಯಗಳಲ್ಲಿ ಪದವಿ ಪಡೆದಿರಬೇಕು, ಬ್ಯಾಂಕಿಂಗ್ ವಲಯದಲ್ಲಿ ಕೆಲಸದ ಅನುಭವವಿರಬೇಕು.



ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2423604 ಅಥವಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article