ಮಂಗಳೂರು ವಿಮಾನ ನಿಲ್ದಾಣದಲ್ಲಿ 13.88 ಲಕ್ಷ ರೂ. ಚಿನ್ನ ಅಕ್ರಮ ಸಾಗಾಟ: ಓರ್ವ ವಶಕ್ಕೆ
Tuesday, September 21, 2021
ಮಂಗಳೂರು: ಬಟ್ಟೆಯಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 13.88 ಲಕ್ಷ ರೂ. ಚಿನ್ನ ಸಹಿತ ಓರ್ವ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಮೂಲದ ಪ್ರಯಾಣಿಕ ಇಂದು ಮಧ್ಯಾಹ್ನ ದುಬೈನಿಂದ ವಿಮಾನದ ಮೂಲಕ ಮಂಗಳೂರು ಏರ್ಪೋರ್ಟ್ ನಲ್ಲಿ ಬಂದು ಇಳಿದಿದ್ದಾನೆ. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಪಾಸಣೆ ನಡೆಸಿದಾಗ ಆತ ಬಟ್ಟೆಯೊಳಗಡೆ ಬಚ್ಚಿಟ್ಟು ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ತಕ್ಷಣ ಆರೋಪಿಯನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯಿಂದ 293.620 ಗ್ರಾಂ (24 ಕ್ಯಾರೆಟ್ ಶುದ್ಧ ಚಿನ್ನ) ತೂಕದ 13,88,823 ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.