-->
ಶೀಘ್ರದಲ್ಲಿ ಬಿಡುಗಡೆಗೊಳ್ಳಲಿದೆ ಅಗ್ಗದ 5G ಸ್ಯಾಮ್‌ಸಂಗ್ A13 5G ಸ್ಮಾರ್ಟ್‌ಫೋನ್...!

ಶೀಘ್ರದಲ್ಲಿ ಬಿಡುಗಡೆಗೊಳ್ಳಲಿದೆ ಅಗ್ಗದ 5G ಸ್ಯಾಮ್‌ಸಂಗ್ A13 5G ಸ್ಮಾರ್ಟ್‌ಫೋನ್...!


ಸ್ಯಾಮ್‌ಸಂಗ್ ಕಂಪೆನಿಯು ಸದ್ಯದಲ್ಲೇ ತನ್ನ A ಸರಣಿಯ ನೂತನ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನನ್ನು ಬಿಡುಗಡೆ ಮಾಡುವ ಬಗ್ಗೆ ಸುಳಿವನ್ನು ನೀಡಿದೆ. 50 ಮೆಗಾಪಿಕ್ಸಲ್ ಕ್ಯಾಮೆರಾ ಮತ್ತು 5G ಸಪೋರ್ಟ್ ಹೊಂದಿರಲಿರುವ ನೂತನ ಗ್ಯಾಲಕ್ಸಿ A13 5G ಸ್ಮಾರ್ಟ್‌ಪೋನನ್ನು ಪರಿಚಯಿಸಲು ಮುಂದಾಗಿದೆ.

ಈ ನೂತನ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್‌ನಲ್ಲಿ 48-ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹಾಗೂ 5,000mAh ಬ್ಯಾಟರಿ ಸಾಮರ್ಥ್ಯವನ್ನು ಒದಗಿಸಲಿದೆ ಎಂದು ಹೇಳಲಾಗಿದ್ದು, ಇದು ಸ್ಯಾಮ್‌ಸಂಗ್‌ ಕಂಪೆನಿಯ ಅಗ್ಗದ 5G ಆಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಭಾರತದಲ್ಲಿ ಕೇವಲ 17,300 ರೂ.ಗಳಿಗೆ ಈ ಸ್ಮಾರ್ಟ್‌ಫೋನ್ ಮಾರಾಟಕ್ಕೆ ಬರಬಹುದು ಎಂದು ಅಂದಾಜಿಸಲಾಗಿದೆ.

ಹಾಗೂ ಈ ಫೋನ್ನಲ್ಲಿ 8GB RAM ಮತ್ತು 48-ಮೆಗಾಪಿಕ್ಸೆಲ್ ಪ್ರಾಥಮಿಕ ಹಿಂಬದಿಯ ಕ್ಯಾಮೆರಾ ಸೆಟಪ್ ಇರಲಿದೆ. ಇನ್ನು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಮತ್ತು 6.6-ಇಂಚಿನ ಫುಲ್-ಎಚ್‌ಡಿ+ ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿರಲಿರುವ ಈ ಸ್ಮಾರ್ಟ್‌ಫೋನ್, 5,000mAh ಬ್ಯಾಟರಿಯನ್ನು ಹೊಂದಿರಲಿದೆ ಮತ್ತು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಹೇಳಲಾಗಿದೆ.ವಾಟರ್‌ಡ್ರಾಪ್-ಶೈಲಿಯ ಡಿಸ್ಪ್ಲೇ ನೋಚ್, 8GB RAM ಮತ್ತು 48-ಮೆಗಾಪಿಕ್ಸೆಲ್ ಪ್ರಾಥಮಿಕ ಹಿಂಬದಿಯ ಕ್ಯಾಮೆರಾ ಇರಲಿದೆ ಎಂದು ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article