ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ನೇಮಕ
Sunday, September 12, 2021
ಗಾಂಧಿನಗರ: ಗುಜರಾತ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಾಸಕ ಭೂಪೇಂದ್ರ ಪಟೇಲ್ ಅವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ.
ಇಂದು ಗಾಂಧಿನಗರ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಬೆಯಲ್ಲಿ
ಭೂಪೇಂದ್ರ ಪಟೇಲ್ ಅವರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡಲಾಯಿತು. ಬಿಜೆಪಿ ವರಿಷ್ಠರಾದ ಪ್ರಹ್ಲಾದ್ ಜೋಷಿ , ನರೇಂದ್ರ ತೋಮರ್,
ತರುಣ್ ಚುಗ್ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರ
ಹೆಸರನ್ನು ಘೋಷಿಸಲಾಯಿತು. ಈ ಸಭೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಕೂಡ ಭಾಗವಹಿಸಿದ್ದರು.
ಗುಜರಾತ್ ವಿಧಾನಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು ಚುನಾವಣಾ ತಂತ್ರದ ಭಾಗವಾಗಿ ಹೊಸ ಸಿಎಂ ನೇಮಕ ಮಾಡಲಾಗಿದೆ. ವಿಜಯ್ ರೂಪಾನಿ ಅವರು ನಿನ್ನೆಯಷ್ಟೆ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
Gujarat: BJP MLA Bhupendra Patel elected as the new leader of BJP Legislative Party pic.twitter.com/nXeYqh7yvm
— ANI (@ANI) September 12, 2021