ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ
ಗಾಂಧಿನಗರ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಗುಜರಾತ್ ಸಿಎಂ ವಿಜಯ್
ರೂಪಾನಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ
ನೀಡಿದ್ದಾರೆ.
ವಿಜಯ್ ರೂಪಾನಿ ಅವರು
ಇಂದು ಮಧ್ಯಾಹ್ನ ರಾಜಭವನಕ್ಕೆ ತೆರಳಿ ತಮ್ಮ
ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದು ಇದು
ಭಾರಿ ಚರ್ಚೆಗೆ ಕಾರಣವಾಗಿದೆ. ಮುಂದಿನ ವರ್ಷ ಗುಜತರಾತ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದರ ಮಧ್ಯೆ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ. ಮುಂದಿನ
ಚುನಾವಣೆಯಲ್ಲಿ ಗೆಲ್ಲುವ ತಂತ್ರದಲ್ಲಿ ವಿಜಯ್ ರೂಪಾನಿಯನ್ನು
ಬದಲಾಯಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ. ಗುಜರಾತ್ ರಾಜ್ಯವು ಪ್ರಧಾನಮಂತ್ರಿ ನರೇಂದ್ರ
ಮೋದಿಯವರ ತವರು ರಾಜ್ಯವಾಗಿದ್ದು ಈ ರಾಜ್ಯದಲ್ಲಿ ಚುನಾವಣೆಯನ್ನು ಗೆಲ್ಲುವುದು ಬಿಜೆಪಿಗೆ ಪ್ರತಿಷ್ಠೆಯಾಗಿದೆ.
ಬಿಜೆಪಿ ತಂತ್ರಗಾರಿಕೆಯ ಭಾಗವಾಗಿಯೆ ಈಗಾಗಲೆ ಕರ್ನಾಟಕದಲ್ಲಿ
ಕೂಡ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರನ್ನು ಬದಲಾಯಿಸಿ ಬಸವರಾಜ ಬೊಮ್ಮಾಯಿ ಅವರನ್ನು
ಆಯ್ಕೆ ಮಾಡಿತ್ತು. ಇದೀಗ ಇಂತಹದೆ ಪ್ರಯೋಗವನ್ನು ಗುಜರಾತ್
ನಲ್ಲಿ ಮಾಡಲು ಬಿಜೆಪಿ ಮಂದಾಗಿದೆಯೆ ಎಂಬುದು ಚರ್ಚೆಗೆ ಗ್ರಾಸವಾಗಿದೆ