-->
forest dept under fire- ಅರಣ್ಯ ಇಲಾಖೆಯ ದೌರ್ಜನ್ಯ; ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಖಂಡನೆ

forest dept under fire- ಅರಣ್ಯ ಇಲಾಖೆಯ ದೌರ್ಜನ್ಯ; ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಖಂಡನೆ

ರಾಷ್ಟ್ರೀಯ ಉದ್ಯಾನವನದೊಳಗೆ ರಸ್ತೆ ದುರಸ್ತಿ ಮಾಡಿದ ಕಾರಣಕ್ಕೆ ಕುತ್ಲೂರಿನಲ್ಲಿ ಆದಿವಾಸಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ವನ್ಯಜೀವಿ ಅರಣ್ಯ ಇಲಾಖೆಯ ಕ್ರಮವನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ತೀವ್ರವಾಗಿ ಖಂಡಿಸಿದೆ.


ಕೆಲದಿನಗಳ ಹಿಂದೆ ಉದ್ಯಾನವನದೊಳಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ಇರುವ ರಸ್ತೆಯನ್ನು ದುರಸ್ತಿಮಾಡಬಹುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳ ಮುಂದೆಯೇ ಹೇಳಿದ್ದರು.


ಆದರೆ, ಇದೀಗ ಹಾರೆಯಿಂದ ರಸ್ತೆ ದುರಸ್ತಿ ಮಾಡಿದ್ದ ಕಾರಣಕ್ಕಾಗಿ ಕ್ರಿಮಿನಲ್ ಕೇಸು ದಾಖಲಿಸುವ ಮೂಲಕ ಅರಣ್ಯ ಇಲಾಖೆ ಆದಿವಾಸಿಗಳ ಮೇಲೆ ದೌರ್ಜನ್ಯ ನಡೆಸಲು ಹೊರಟಿದೆ ಎಂದು ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.






ಅರಣ್ಯ ಇಲಾಖೆಯು ಆದಿವಾಸಿಗಳ ಮೇಲೆ ನಡೆಸುವ ದೌರ್ಜನ್ಯ ಅತ್ಯಂತ ಕ್ರೂರತನದಿಂದ ಕೂಡಿದ್ದು , ಈ ರೀತಿಯ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಮಿತಿ ಹೇಳಿದೆ.


ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಲು ಅವಕಾಶ ನೀಡದೆ ಅತ್ಯಂತ ಅಮಾನವೀಯವಾಗಿ ವರ್ತಿಸಿರುವ ಅರಣ್ಯ ಇಲಾಖೆಯ ದೌರ್ಜನ್ಯದ ನಮ್ಮ ಸಂಘಟನೆ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ.


ಕೂಡಲೆ ಆದಿವಾಸಿಗಳ ವಿರುದ್ದ ದಾಖಲಿಸಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಅವರು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸಂಚಾಲಕ ಶೇಖರ ಲಾಯಿಲ ಹಾಗೂ ಕಾರ್ಯದರ್ಶಿ ಜಯಾನಂದ ಪಿಲಿಕಳ ಎಚ್ಚರಿಸಿದ್ದಾರೆ.

Ads on article

Advertise in articles 1

advertising articles 2

Advertise under the article