-->
ಮಂಗಳೂರು :  ದೀಪಕ್ ರಾವ್ ಕೊಲೆ ಆರೋಪಿಯಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ

ಮಂಗಳೂರು : ದೀಪಕ್ ರಾವ್ ಕೊಲೆ ಆರೋಪಿಯಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ

 



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರಕರಣದ ಆರೋಪಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

 

ದೀಪಕ್ ರಾವ್ ಹತ್ಯಾ ಆರೋಪಿ  ಕಿನ್ನಿಗೋಳಿಯ ಮನ್ನಬೆಟ್ಟುವಿನ ಮೊಹಮ್ಮದ್ ನೌಶದ್ (25) ಎಂಬಾತ ಈ ಕೃತ್ಯವೆಸಗಿದ್ದಾನೆ. ಈತ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿದ್ದು ಈ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಈತ ಮೂರನೇ ಆರೋಪಿಯಾಗಿದ್ದ.  ಜಾಮೀನು ಪಡೆದು ಹೊರಗಿದ್ದ ಈತ ಈ ಕೃತ್ಯವೆಸಗಿ ಮತ್ತೆ ಜೈಲುಪಾಲಾಗಿದ್ದಾನೆ.

Ads on article

Advertise in articles 1

advertising articles 2

Advertise under the article