ಪಂಜಾಬ್ ಮುಖ್ಯಮಂತ್ರಿ ರಾಜೀನಾಮೆ- ಕಾಂಗ್ರೆಸ್ ಪಕ್ಷಕ್ಕೆ ಕೈ ಕೊಡ್ತಾರ ಸಿಎಂ
Saturday, September 18, 2021
ನವದೆಹಲಿ: ಪಂಜಾಬ್ ಸಿಎಂ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ಸಂಜೆ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿದ ಅಮರಿಂದರ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಂಜಾಬ್ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದೆ. ಈ ಸಂದರ್ಭದಲ್ಲಿ ಯೆ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಒತ್ತಡಕ್ಕೆ ಮಣಿದು ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ಸಂಜೆ 5 ಗಂಟೆಗೆ ಪಂಜಾಬ್ ಕಾಂಗ್ರೆಸ್ ಭವನದಲ್ಲಿ ಶಾಸಕರ ಸಭೆಯನ್ನು ಕರೆಯಲಾಗಿದ್ದು ಅದಕ್ಕೆ ಮೊದಲೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬರುವ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮೊದಲು ಸಿಎಂ ನ್ನು ಬದಲಿಸಬೇಕೆಂದು ಕಾಂಗ್ರೆಸ್ ನ 50 ಶಾಸಕರು ಸೋನಿಯಾ ಗಾಂಧಿ ಪತ್ರ ಬರೆದಿದ್ದರು. ಇದೀಗ ರಾಜೀನಾಮೆ ಸಲ್ಲಿಸಿರುವ ಅಮರೀಂದರ್ ಸಿಂಗ್ ಅವರ ಮುಂದಿನ ನಡೆ ಏನು ಎಂಬುದು ಕುತೂಹಲ ಕ್ಕೆ ಕಾರಣವಾಗಿದೆ.
Submitted my resignation to Honble Governor. pic.twitter.com/sTH9Ojfvrh
— Capt.Amarinder Singh (@capt_amarinder) September 18, 2021