ಕಾರ್ಕಳ: ನೇಣಿಗೆ ಕೊರಳೊಡ್ಡಿದ ಉಪನ್ಯಾಸಕಿ
Tuesday, September 21, 2021
ಕಾರ್ಕಳ: ಉಪನ್ಯಾಸಕಿಯೋರ್ವರು ನೇಣಿಗೆ ಕೊರಳೊಡ್ಡಿರುವ ಘಟನೆ ನಿನ್ನೆ ಕಾರ್ಕಳದ ಪೆರ್ವಾಜೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ಉಪನ್ಯಾಸಕಿ ಮಮತಾ ಶೆಟ್ಟಿ (42) ಎಂದು ಗುರುತಿಸಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಸ್‌ವಿಟಿ ಪಿಯು ಕಾಲೇಜಿನ ಉಪನ್ಯಾಸಕಿಯಾಗಿರುವ ಮಮತಾ ಶೆಟ್ಟಿಯವರು ಪೆರ್ವಾಜೆ ನಿವಾಸಿಯಾಗಿದ್ದು, ಸ್ವಗೃಹದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತಿ, ಓರ್ವ ಪುತ್ರನನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಘಟನೆ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.