-->
ಕೊನೆಗೂ 1 ರಿಂದ 5 ನೇ ತರಗತಿ ಶಾಲೆ ಆರಂಭಕ್ಕೆ ಒಪ್ಪಿಗೆ- ಇಲ್ಲಿದೆ ಶಿಕ್ಷಣ ಇಲಾಖೆಯ ಮಾಹಿತಿ

ಕೊನೆಗೂ 1 ರಿಂದ 5 ನೇ ತರಗತಿ ಶಾಲೆ ಆರಂಭಕ್ಕೆ ಒಪ್ಪಿಗೆ- ಇಲ್ಲಿದೆ ಶಿಕ್ಷಣ ಇಲಾಖೆಯ ಮಾಹಿತಿ


ಬೆಂಗಳೂರು :  1 ರಿಂದ 5 ನೇ ತರಗತಿಯವರೆಗೆ ಶಾಲೆಗಳನ್ನು ಅಕ್ಟೋಬರ್ 25  ರಿಂದ ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಕೊರೊನಾ  ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ಶಿಕ್ಷಣ ಇಲಾಖೆ ತೆಗೆದುಕೊಂಡಿದೆ.ಶಾಲೆಗೆ ಕಳುಹಿಸಲು ಪೋಷಕರ ಅನುಮತಿ ಕಡ್ಡಾಯವಾಗಿರಬೇಕು ಎಂಬ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.


ತರಗತಿ ನಡೆಸುವ  ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆದಿರಬೇಕು.ಮಕ್ಕಳು ತರಗತಿಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಕ್ಕಳಿಗೆ ಶಾಲೆಗೆ ಹಾಜರಾಗುವುದು  ಕಡ್ಡಾಯವಾಗಿರುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article