
ಮಂಗಳೂರಿನಲ್ಲಿ ಏಳು ಮಂದಿ ಬಜರಂಗದಳ ಕಾರ್ಯಕರ್ತರು ಪೊಲೀಸ್ ವಶಕ್ಕೆ- ಕಾರಣ? ( VIDEO)
Wednesday, October 20, 2021
ಮಂಗಳೂರು: ಕೇಸರಿ ಬಟ್ಟೆ ಬಗ್ಗೆ ಕಾಂಗ್ರೆಸ್ ಮುಖಂಡ ಐವನ್ ಡಿಸೋಜ ನೀಡಿರುವ ಹೇಳಿಕೆಯನ್ನು ಖಂಡಿಸಿ ಮಂಗಳೂರಿನಲ್ಲಿ
ಐವನ್ ಡಿಸೋಜ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಜರಂಗದಳ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು
ವಶಕ್ಕೆ ತೆಗೆದುಕೊಂಡರು.
ಐವನ್ ಡಿಸೋಜ ಅವರು ವಾಹಿನಿಯೊಂದರ ಚರ್ಚೆಯಲ್ಲಿ ಬಜರಂಗದಳ ಕಾರ್ಯಕರ್ತರು
ಮತ್ತು ಕೇಸರಿ ಬಟ್ಟೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ವಿರೋಧಿಸಿ ಬಜರಂಗದಳ
ಕಾರ್ಯಕರ್ತರು ಐವನ್ ಡಿಸೋಜ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದರು.
ಅದರಂತೆ ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜ ಮನೆಗೆ ಮುತ್ತಿಗೆ ಹಾಕಲು
ಬಜರಂಗದಳ ಕಾರ್ಯಕರ್ತರು ತೆರಳಿದ್ದು ಈ ವೇಳೆ ರಸ್ತೆಯಲ್ಲಿ ಬಜರಂಗದಳ ಕಾರ್ಯಕರ್ತರನ್ನು ವಶಕ್ಕೆ ಪಡೆದು
ಬಳಿಕ ಬಿಡುಗಡೆಗೊಳಿಸಿದ್ದಾರೆ