
Job in Dharwad Agri University - ಧಾರವಾಡದ ಕೃಷಿ ವಿವಿ ನೇಮಕಾತಿ: 74 ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
ಧಾರವಾಡದ ಕೃಷಿ ವಿವಿ ನೇಮಕಾತಿ: 74 ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ 74 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 28 ಮತ್ತು 29, 2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಇಲ್ಲಿದೆ...
ಕೃಷಿ ವಿಶ್ವ ವಿದ್ಯಾಲಯ ಧಾರವಾಡದಲ್ಲಿ 74 ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ
ವಿದ್ಯಾರ್ಹತೆ:
ಪಿಹೆಚ್.ಡಿ Phd, ಎಂ.ಎಸ್ಸಿ MSc, ಬಿ.ಎಸ್ಸಿ BSc, ಎಸ್‌ಎಸ್‌ಎಲ್‌ಸಿ/ಹತ್ತನೇ ತರಗತಿ SSLC/10th, ಎಂ.ಇ ME /ಎಂ.ಟೆಕ್ M.Tech, ಬಿ.ಇ BE/ಬಿ.ಟೆಕ್ B.Tech ಮತ್ತು ಪದವಿ Degree ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಯಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಆಯಾ ಹುದ್ದೆಗೆ ನೇಮಕಾತಿ ಬಯಸಿ ಸಂದರ್ಶನಕ್ಕೆ ಹಾಜರಾಗಬಹುದು.
ವಯೋಮಿತಿ:
ಕೃಷಿ ವಿಶ್ವವಿದ್ಯಾಲಯ, ಧಾರವಾಡ ನೇಮಕಾತಿಯ ವಿವಿಧ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ವಾಕ್ ಇನ್ ಇಂಟರ್ವ್ಯೂ (Walk - in - Interview) ನಲ್ಲಿ ಭಾಗವಹಿಸಬಹುದು.
ವೇತನ:
ಕೃಷಿ ವಿಶ್ವವಿದ್ಯಾಲಯ, ಧಾರವಾಡ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರಿಂದ 70,000/- ರೂ. ಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಕೃಷಿ ವಿಶ್ವವಿದ್ಯಾಲಯ, ಧಾರವಾಡ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನದ ವಿವರ:
ಕೃಷಿ ವಿಶ್ವವಿದ್ಯಾಲಯ, ಧಾರವಾಡ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಲಾಗುತ್ತಿರುವ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://uasd.edu/ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಅಕ್ಟೋಬರ್ 28,2021 ಮತ್ತು ಅಕ್ಟೋಬರ್ 29,2021ರಂದು ಬೆಳಿಗ್ಗೆ 10 ಗಂಟೆಯಿಂದ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ:
ಡೀನ್ (ಕೃಷಿ),
ಕೃಷಿ ಮಹಾವಿದ್ಯಾಲಯ,
ಧಾರವಾಡ