Job in Govt Company- ಯುರೇನಿಯಂ ಕಾರ್ಪೊರೇಶನ್ ಇಂಡಿಯಾ: 242 ಹುದ್ದೆಗಳಿಗೆ ನೇಮಕಾತಿ
ಯುರೇನಿಯಂ ಕಾರ್ಪೊರೇಶನ್ ಇಂಡಿಯಾ: 242 ಹುದ್ದೆಗಳಿಗೆ ನೇಮಕಾತಿ
ಸರ್ಕಾರಿ ಸ್ವಾಮ್ಯದ ಯುರೇನಿಯಂ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಯುಸಿಐಎಲ್)ನಲ್ಲಿ ಖಾಲಿ ಇರುವ ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ಫಿಟ್ಟರ್, ಟರ್ನರ್, ಎಲೆಕ್ಟ್ರಿಷನ್, ಮೆಕ್ಯಾನಿಸ್ಟ್, ಪ್ಲಂಬರ್, ಪೈಂಟರ್
ಒಟ್ಟು ಹುದ್ದೆಗಳ ಸಂಖ್ಯೆ: 242
ಶೈಕ್ಷಣಿಕ ಅರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಎಸ್ಸೆಸ್ಸೆಲ್ಸಿ, ಐಟಿಐ ಮುಗಿಸಿರಬೇಕು
ವಯೋಮಿತಿ: ಕನಿಷ್ಟ 15, ಗರಿಷ್ಟ 24
ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ನೇಮಕಾತಿ ವಿಧಾನ: ಶೈಕ್ಷಣಿಕ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ತಯಾರಿಸಿ ನೇರ ನೇಮಕಾತಿ ನಡೆಸಲಾಗುವುದು
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸಬೇಕು. ಸಂಸ್ಥೆಯ ಅಧಿಕೃತ ಅಂತರ್ಜಾಲದಲ್ಲಿ ಅಗತ್ಯ ಮಾಹಿತಿ ಪಡೆದು ಬಳಿಕ ಅರ್ಜಿ ಸಲ್ಲಿಸಬೇಕು. ಇತರ ಯಾವುದೇ ವಿಧಾನದಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾನ್ಯ ಮಾಡಲಾಗದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 29/10/2021
ಅಧಿಕೃತ ವೆಬ್‌ಸೈಟ್: http://www.ucil.gov.in/