Missing: ಬೆಳ್ತಂಗಡಿಯ 21 ವರ್ಷದ ಯುವತಿ ನಾಪತ್ತೆ
Tuesday, October 26, 2021
ಮಂಗಳೂರು: ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ 21 ವರ್ಷದ ಯುವತಿ ನಾಪತ್ತೆಯಾದ ಬಗ್ಗೆ ಆಕೆಯ ಪೋಷಕರು ಪೊಲೀಸ್ ದೂರು ದಾಖಲಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ರಾಮ ಅವರ ಪುತ್ರಿ ರೇಣುಕಾ(21) ನಾಪತ್ತೆಯಾದವರು.
ರೇಣುಕಾ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯ ದುರ್ಗಾ ಕ್ಲಿನಿಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಕಳೆದ ಮೂರು ತಿಂಗಳಿನಿಂದ ತಾಯಿಯ ಆರೈಕೆಗೆಂದು ಮನೆಯಲ್ಲಿಯೇ ಇದ್ದರು. ಅ.25ರಂದು ಮನೆಯಿಂದ ಯಾರೂ ಇಲ್ಲದ ಸಂದರ್ಭದಲ್ಲಿ ಅವರು ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ. ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಕೆಯ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.