
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ- ಯುವಜೋಡಿಗೆ ಬಜರಂಗದಳದಿಂದ ಹಲ್ಲೆ ಆರೋಪ- ಇಬ್ಬರ ಬಂಧನ
Thursday, October 7, 2021
ಮಂಗಳೂರು; ಮಂಗಳೂರಿನಲ್ಲಿ ಮತ್ತೊಮ್ಮೆ ನೈತಿಕ ಪೊಲೀಸ್ ಗಿರಿ ನಡೆದಿರುವ ಘಟನೆ ನಡೆದಿದ್ದು ಇಬ್ಬರು ಬಜರಂಗದಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕದ್ರಿಯ ಸೈಂಟ್ ಆಗ್ನೇಸ್ ಕಾಲೇಜಿನ ಬಳಿ ಜೋಡಿಯೊಂದು ತಿರುಗಾಡುತ್ತಿದ್ದಾಗ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಈ ಜೋಡಿಯನ್ನು ಕದ್ರಿ ಪೊಲೀಸರ ವಶಕ್ಕೊಪ್ಪಿಸಿದ್ದಾರೆ.
ಈ ಸಂದರ್ಭದಲ್ಲಿ ತಮ್ಮ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಜೋಡಿ ದೂರು ನೀಡಿದ್ದಾರೆ. ಜೋಡಿ ಯ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಬಜರಂಗದಳದ ಕಾರ್ಯಕರ್ತರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.