
ಆಕೆಯನ್ನು ನೋಡಲು ಬಂದ ಆತ: ಗ್ರಾಮಸ್ಥರು ಅಕ್ರಮ ಸಂಬಂಧದ ಶಂಕೆಯಲ್ಲಿ ಇಬ್ಬರನ್ನೂ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದರು
Saturday, November 27, 2021
ಮೈಸೂರು: ಪ್ರೀತಿಸುತ್ತಿದ್ದ ಯುವ ಜೋಡಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಮನಬಂದಂತೆ ಥಳಿಸಿರುವ ನಡೆಸಿರುವ ಅಮಾನವೀಯ ಘಟನೆಯೊಂದು ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಹೆಮ್ಮರಗಾಲ ಎಂಬಲ್ಲಿ ಈ ಘಟನೆ ನಡೆದಿದೆ. ವಿವಾಹಿತೆ ಎಂದು ಹೇಳಲಾಗುತ್ತಿರುವ ಯುವತಿಯೋರ್ವಳು ಯುವಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕೆ ವ್ಯಕ್ತಪಡಿಸಿರುವ ಗ್ರಾಮಸ್ಥರು ಈ ಕೃತ್ಯ ಎಸಗಿದ್ದಾರೆ. ರಾತ್ರಿ ಪೂರ್ತಿ ಇಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ, ಮನ ಬಂದಂತೆ ಥಳಿಸಿ ಹಲ್ಲೆ ನಡೆಸಿದ್ದಾರೆ.
ಇವರಿಬ್ಬರ ಮಧ್ಯೆ ಹಲವು ವರ್ಷಗಳಿಂದ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ಯುವತಿಯ ಮನೆಗೆ ಯವಕ ಬಂದಾಗ ಗ್ರಾಮಸ್ಥರು ಆತನನ್ನು ಹಿಡಿದು ಯುವತಿಯನ್ನು ಸೇರಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಇಬ್ಬರಿಗೂ ಥಳಿಸಿದ್ದಾರೆ. ಇಬ್ಬರನ್ನೂ ಗ್ರಾಮದ ನಡುಬೀದಿಯ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ್ದಲ್ಲದೆ, ಅನ್ನ-ನೀರು ಕೊಡದೆ ಸತಾಯಿಸಲಾಗಿದೆ ಎನ್ನಲಾಗಿದೆ.