ಬೆಂಗಳೂರು: ಹೊಟ್ಟೆನೋವಿನ ಸಂಕಟ ತಾಳಲಾರದೆ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿ ಮಾಡಿದ್ದೇನು ಗೊತ್ತೇ?
Sunday, November 28, 2021
ಬೆಂಗಳೂರು: ನಿತ್ಯವೂ ಒಂದಲ್ಲ ಒಂದು ಕಾರಣಕ್ಕೆ ನಮ್ಮ ಸುತ್ತು ಮುತ್ತಲೂ ಆತ್ಮಹತ್ಯೆ ಪ್ರಕರಣ ನಡೆಯುತ್ತಲೇ ಇರುತ್ತದೆ. ಇತ್ತೀಚೆಗೆ ಸಾವಿಗೆ ಶರಣಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದೀಗ ವಿದ್ಯಾರ್ಥಿನಿಯೋಳು ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡಿದ್ದಾಳೆ. ಬೆಂಗಳೂರು ಉತ್ತರ ತಾಲ್ಲೂಕು ಮಾದನಾಯಕನಹಳ್ಳಿ ಸಮೀಪದ ಸಿದ್ಧನಹೊಸಹಳ್ಳಿ ಗ್ರಾಮದ ನಿವಾಸಿ, ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದವಳು.
ಇಲ್ಲಿನ ನಾರಾಯಣಪ್ಪ - ಮುನಿಲಕ್ಷ್ಮಮ್ಮ ದಂಪತಿಯ ಈ ಪುತ್ರಿ ಶಿಲ್ಪಾ (22) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ.
ಈಕೆ ತನ್ನ ಮನೆಯ ಕೋಣೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೀಣ್ಯದ ಪ್ರತಿಷ್ಠಿತ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಕಾಂ ವಿದ್ಯಾರ್ಥಿನಿಯಾಗಿದ್ದ ಶಿಲ್ಪಾ, ಕೆಲದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.