Hajabba honoured- ಮಂಗಳೂರು: ಪದ್ಮಶ್ರೀ ಹರೇಕಳ ಹಾಜಬ್ಬ ಅವರಿಗೆ ವಕೀಲರ ಸಂಘದ ಗೌರವ ಸನ್ಮಾನ
ಮಂಗಳೂರು: ಪದ್ಮಶ್ರೀ ಹರೇಕಳ ಹಾಜಬ್ಬ ಅವರಿಗೆ ವಕೀಲರ ಸಂಘದ ಗೌರವ ಸನ್ಮಾನ
ಮಂಗಳೂರು ವಕೀಲರ ಸಂಘ(MBA)ದ 2021ನೇ ವರ್ಷದ ವಾರ್ಷಿಕೋತ್ಸವ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಸಂಭ್ರಮದಿಂದ ನಡೆಯಿತು.
ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಶ್ರೀ ಮುರಳೀಧರ ಪೈ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. 'ಪದ್ಮಶ್ರೀ' ಪುರಸ್ಕೃತ ಹರೇಕಳ ಹಾಜಬ್ಬ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿದರು.
ಆದರ್ಶ ಜೀವಿ ಹಾಜಬ್ಬ ಅವರ ಕನಸನ್ನು ನನಸು ಮಾಡಲು ಸಹಕಾರಿಯಾಗುವ ನಿಟ್ಟಿನಲ್ಲಿ ವಕೀಲರೇ ವಂತಿಗೆ ಹಾಕಿ ಸಂಗ್ರಹಿಸಿದ ಸುಮಾರು 2 ಲಕ್ಷ ರೂ.ಗಳನ್ನು ಸಮಾರಂಭದಲ್ಲಿ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ರಾಜ್ಯಮಟ್ಟದ ಪ್ರಶಸ್ತಿ ಪಡೆದ 'ತುಳುನಾಡ ವೈಭವ" ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಕೀಲರು ಪ್ರದರ್ಶಿಸಿದರು.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಕೀಲರ ತಂಡಗಳು ಮತ್ತು ಸದಸ್ಯರು ನೀಡಿದರು. ಈ ವಾರ್ಷಿಕೋತ್ಸವದಲ್ಲಿ ನ್ಯಾಯಾಧೀಶರು ಮತ್ತು ವಕೀಲರು ತಮ್ಮ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಂಡಿದ್ದು ವಿಶೇಷವಾಗಿತ್ತು.