
ಪಕ್ಕದ ಮನೆಯವನಿಂದಲೇ ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ...!!
Friday, November 12, 2021
ಶಿವಮೊಗ್ಗ: ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯಾತನೇ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.
ಮನೆಯ ಮುಂದೆ ಆಟ ಆಡುತ್ತಿದ್ದ ಬಾಲಕಿ ಪಕ್ಕದ ಮನೆಗೆ ಹೋದಾಗ ಆತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.ಈ ಬಗ್ಗೆ ಬಾಲಕಿಯ ತಾಯಿ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.