Job in RDPR Department- ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇಮಕಾತಿ- ಡೇಟಾಬೇಸ್ ಅಡ್ಮಿನ್ ಹುದ್ದೆ
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇಮಕಾತಿ- ಡೇಟಾಬೇಸ್ ಅಡ್ಮಿನ್ ಹುದ್ದೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಇಲಾಖೆಯಲ್ಲಿ ಡೇಟಾಬೇಸ್ ಅಡ್ಮಿನ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ನವೆಂಬರ್ 26, 2021ರೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಈ ಹುದ್ದೆಗೆ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಬಿ.ಇ/ಬಿ.ಟೆಕ್/ಎಂಸಿಎ/ಎಂಎಸ್ಸಿ ಪದವಿ ಪಡೆದಿರಬೇಕು.
ವಯೋಮಿತಿ:
ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳಿಗೆ ಗರಿಷ್ಟ 45 ವರ್ಷ
ವೇತನ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನ ಹಾಗೂ ಇತರ ಸೌಲಭ್ಯಗಳನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ನೇಮಕಾತಿ ನಡೆಸಲಾಗುವುದು.
ಅರ್ಜಿ ಸಲ್ಲಿಕೆ ಹೇಗೆ..?
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://rdpr.karnataka.gov.in/english ನಲ್ಲಿ ಎಲ್ಲ ಮಾಹಿತಿ ಹಾಗೂ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.
ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳ ಜೊತೆಗೆ ನವೆಂಬರ್ 26,2021ರ ಸಂಜೆ 5:30ರೊಳಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿ ವಿಳಾಸ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,
3ನೇ ಮಹಡಿ,
3ನೇ ಗೇಟ್, ಎಂ.ಎಸ್ ಕಟ್ಟಡ,
ಬೆಂಗಳೂರು-560001.